ಭೂ ಒಡೆತನ ಯೋಜನೆಯಡಿ ಜಮೀನು ಖರೀದಿ: ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶ
ಬಳ್ಳಾರಿ,ಮೇ 30ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ವತಿಯಿಂದ ಭೂ ಒಡೆತನ ಯೋಜನೆಯಡಿ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ಉದ್ದೇಶಿಸಲಾಗಿದ್ದು, ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ನಡವಿ ಮತ್ತು ಮೈಲಾಪುರ ಗ್ರಾಮದಲ್ಲಿನ ಜಮೀನುಗಳನ್ನು ಐದು ಜನ ಭೂಮಾಲೀಕರು ತಮ್ಮ ಜಮೀನುಗಳನ್ನು ನಿಗಮಕ್ಕೆ ಮಾರಾಟ ಮಾಡಲು ಒಪ್ಪಿಗೆ ಸಲ್ಲಿಸಿರುತ್ತಾರೆ.
ಜಮೀನುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಏನಾದರೂ ಅಕ್ಷೇಪಣೆಗಳಿದ್ದಲ್ಲಿ ಜೂನ್ 15 ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಲಿಖಿತವಾಗಿ ಅಕ್ಷೇಪಣೆ ಸಲ್ಲಿಸಬಹುದು.
ಸಾರ್ವಜನಿಕರಿಂದ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.