Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ-ಧರ್ಮ ಭೇದ ನಿವಾರಣೆಗೆ ಅಂಬೇಡ್ಕರ್ ಪಂಚಲೋಹದ ಪುತ್ಥಳಿ ಅನಾವರಣ : ಗೋಪಿನಾಥ ಮೀಸಿ

ಜಮಖಂಡಿ, ಮೇ 28 : ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ವೈಮನಸ್ಸು ಹೆಚ್ಚಾಗುತ್ತಿದ್ದು, ಸಮಾಜದಲ್ಲಿ ಅಸಮಾನತೆ ಹಾಗೂ ಕೀಳರಿಮೆ ಭಾವನೆಗಳು ವೃದ್ಧಿಯಾಗುತ್ತಿವೆ. ಸಮಾನತೆ, ಸಹೋದರತೆ ಮತ್ತು ಮಾನವೀಯತೆಯ ಸಂದೇಶವನ್ನು ಸಮಾಜಕ್ಕೆ ಸಾರುವ ಉದ್ದೇಶದಿಂದ ಗೋಠೆ ಗ್ರಾಮದಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಪಂಚಲೋಹದ ಪುತ್ಥಳಿಯನ್ನು ಅನಾವರಣಗೊಳಿಸಲಾಗುತ್ತಿದೆ ಎಂದು ಪ್ರಜಾ ಪರಿವರ್ತನೆ ವೇದಿಕೆಯ ಕಾರ್ಯದರ್ಶಿ ಗೋಪಿನಾಥ ಮೀಸಿ ತಿಳಿಸಿದರು.
ನಗರದ ರಮಾ ನಿವಾಸದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮಖಂಡಿಯ ಡಾ. ಬಿ.ಆರ್. ಅಂಬೇಡ್ಕರ್ ಬುದ್ಧ ವಿಹಾರ ನಿರ್ಮಾಣ ಸಮಿತಿ, ಗೋಠೆಯ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಳ ಹಾಗೂ ಶ್ರೀ ಕಾಶಿಲಿಂಗೇಶ್ವರ ಕಮಿಟಿಯ ಸಂಯುಕ್ತ ಆಶ್ರಯದಲ್ಲಿ ಮೇ 31ರಂದು ಗೋಠೆ ಗ್ರಾಮದಲ್ಲಿ ಸುಮಾರು ₹12 ಲಕ್ಷ ವೆಚ್ಚದಲ್ಲಿ ಪಂಚಲೋಹದ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಆಮಂತ್ರಣ ಪತ್ರಿಕೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಹೆಸರನ್ನಷ್ಟೇ ಸೇರಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಗುಡಗುಂಟಿ ಅವರು ಶಾಸಕರಾದ ಕೆಲವೇ ದಿನಗಳಲ್ಲಿ “ಸಮಾನತೆಯನ್ನು ತೆಗೆದುಹಾಕಲಾಗುವುದು” ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಅವರು ದಲಿತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಭಾವನೆ ಮೂಡಿದೆ. ಆದ್ದರಿಂದ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರ ನಡುವೆ ಭಿನ್ನಾಭಿಪ್ರಾಯ ಮತ್ತು ದ್ವೇಷ ಹುಟ್ಟುಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಅಂಬೇಡ್ಕರ್ ಅವರ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮಕ್ಕೆ ಮೈಸೂರಿನ ಉರಲಿಂಗ ಪೆದ್ದಿ ಮಠದ ಪೂಜ್ಯ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಅಂಬೇಡ್ಕರವಾದಿ ಚಿಂತಕರಾದ ಬೆಂಗಳೂರಿನ ಬಿ. ಗೋಪಾಲ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಪಂಚಲೋಹದ ಮೂರ್ತಿಯನ್ನು ಅನಾವರಣಗೊಳಿಸಲಿದ್ದು, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಆನಂದ ಸಿದ್ದು ನ್ಯಾಮಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ, ಬೀಳಗಿ ಶಾಸಕ ಜೆ.ಟಿ. ಪಾಟೀಲ್, ಕುಡಚಿ ಶಾಸಕ ಮಹೇಶ್ ತಮ್ಮಣ್ಣವರ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ವೀಣಾ ಕಾಶಪ್ಪನವರ, ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಸಿದ್ದಾರ್ಥ ಡಿ. ಚಿಮ್ಮಾ ಇದ್ಲಾಯಿ ಅವರ ತಂಡದಿಂದ ಭೀಮ ಕ್ರಾಂತಿಗೀತೆಗಳ ಸಂಗೀತ ಕಾರ್ಯಕ್ರಮವೂ ನಡೆಯಲಿದೆ ಎಂದು ಗೋಪಿನಾಥ ಮೀಸಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀನಾಥ ಎಸ್. ಬಸವರಾಜ, ಚನ್ನಬಸು ಗುಣದಾಳ, ಶರಣಪ್ಪ ಹೊಸಬಲಿ, ಆನಂದ ಎಸ್. ಬಡಿಗೇರ, ಗೋಪಾಲ ಜುಮ್ಮನಾಳ, ಎಸ್.ಕೆ. ಬಸವರಾಜ ಹಾಗೂ ಭೀಮರಾವ್ ದೊಡ್ಡಮನಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ