Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕೋಡಿಯಲ್ಲಿ ವೃದ್ಧ ರೈತ ಮೊಸಳೆ ದಾಳಿಗೆ ಬಲಿ

ಬೆಳಗಾವಿ, ಮೇ 13: ವೃದ್ಧ ರೈತರೊಬ್ಬರು ಮೊಸಳೆ ದಾಳಿಗೆ ಬಲಿಯಾದ ದಾರುಣ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾಡ-ಸದಲಗಾ ಬಳಿಯ ದೂದ್​​​​ಗಂಗಾ ನದಿ (ದಡದಲ್ಲಿ ಸಂಭವಿಸಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ ನಿವಾಸಿ ಮಹಾದೇವ ಪುನ್ನಪ್ಪ ಖುರೆ (72) ಎಂದು ಗುರುತಿಸಲಾಗಿದೆ.

ಶುಕ್ರವಾರ (ಮೇ 10ರಂದು) ಮಹಾದೇವ ಖುರೆ ನದಿ ತೀರದ ಪ್ರದೇಶದಲ್ಲಿನ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದರು. ಕೃಷಿ ಕೆಲಸ ಮುಗಿಸಿ ಸ್ನಾನ ಮಾಡಲು ನದಿಗೆ ತೆರಳಿದ್ದರು. ನದಿಯಲ್ಲಿ ಕೆಲಹೊತ್ತು ಈಜಿಕೊಂಡು ಮರಳಿ ನದಿಯ ದಡಕ್ಕೆ ಬರುತ್ತಿದ್ದಾಗ ಮೊಸಳೆ ಕಾಲು ಹಿಡಿದು ನೀರಿನೊಳಗೆ ಎಳೆದೊಯ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ರೈತ ಮಹದೇವರ ಎಡತೊಡೆಯ ಮೇಲೆ ಗಾಯದ ಗುರುತು ಇತ್ತು. ಶನಿವಾರ ರಮೇಶ ಪ್ರಧಾನ ಎಂಬುವವರ ಜಮೀನಿನ ಬಳಿಯ ನದಿ ದಂಡೆಯಲ್ಲಿ ಮೃತದೇಹ ಪತ್ತೆಯಾಗಿತ್ತು. ಶವವನ್ನು ಸಾಮಾಜಿಕ ಕಾರ್ಯಕರ್ತ ಸುಕುಮಾರ್ ಉಗಾರೆ ಮತ್ತು ಇತರ ಗ್ರಾಮಸ್ಥರು ನದಿ ದಡದಿಂದ ಹೊರತೆಗೆದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮರಣೋತ್ತರ ಪರೀಕ್ಷೆಯ ವರದಿಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ದೂದ್​​​ಗಂಗಾ ನದಿಯಲ್ಲಿ ಮೊಸಳೆಗಳ ಸಂಖ್ಯೆ ವಿಪರೀತ ಏರಿಕೆ ಕಂಡಿದೆ. ಈ ಘಟನೆ ನಂತರ ರೈತರಲ್ಲಿ ಮೊಸಳೆಗಳ ಭಯ ಹೆಚ್ಚಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ