LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ

ಅಥಣಿ : ಸರ್ಕಾರದ ನಿರ್ದೇಶನದಂತೆ ತಾಲೂಕಿನ ಅನಂತಪೂರ ಹೋಬಳಿ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ವಿವಿಧ ಇಲಾಖೆಗಳ ಸರ್ಕಾರಿ ಸೇವೆ ಹಾಗೂ ಸೌಲಭ್ಯಗಳನ್ನು ತ್ವರಿತವಾಗಿ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಇಂದು ಶನಿವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಸಿದರಾಯ ಭೋಸಗಿ ತಿಳಿಸಿದ್ದಾರೆ.
ಈ ಸಭೆಯು ಅನಂತಪೂರ ಗ್ರಾಮದ "ಅಂಬಾಭವಾನಿ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ. ಇಲ್ಲಿ ನಡೆಯುವ ಪ್ರಜಾ ಸೇವೆ ಆಂದೋಲನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಗ್ರಾಮಕ್ಕೆ ಸಂಬಂಧಿಸಿದ ಕುಂದುಕೊರತೆಗಳು, ಅಹವಾಲುಗಳು, ಬಾಕಿ ಇರುವ ಅರ್ಜಿಗಳು ಹಾಗೂ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ.
ಆದ್ದರಿಂದ ಅನಂತಪೂರ ಹೋಬಳಿಯ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸರ್ಕಾರದ ಈ ಜನಪರ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರ ಸಿದರಾಯ ಭೋಸಗಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸುವ ನಿಟ್ಟಿನಲ್ಲಿ ಈ ಪ್ರಜಾ ಸೇವೆ ಆಂದೋಲನ ಸಭೆ ಮಹತ್ವ ಪಡೆದಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್