ಕೊಪ್ಪಳ ಸೆಪ್ಟೆಂಬರ್ 11 : ಪೌಷ್ಠಿಕ ಆಹಾರದ ಕುರಿತು ಪ್ರತಿಯೊಬ್ಬರೂ ಜಾಗೃತರಾಗುವ ಮೂಲಕ ರಕ್ತಹೀನತೆ ಹಾಗೂ ಅಪೌಷ್ಠಿಕತೆಯನ್ನು ತಡೆಗಟ್ಟಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಬುಧವಾರ (ಸೆ. 9ರಂದು) ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ “ರಾಷ್ಟ್ರೀಯ ಪೌಷ್ಠಿಕ ಸಪ್ತಾಹ” ಜಾಗೃತಿ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿವರ್ಷ ಸೆಪ್ಟೆಂಬರ್ ಮೊದಲನೇ ವಾರದಲ್ಲಿ ರಾಷ್ಟ್ರೀಯ ಪೌಷ್ಠಿಕ ಸಪ್ತಾಹ ಆಚರಿಸಲಾಗುತ್ತದೆ. ಗರ್ಭಿಣಿಯರು, ಮಕ್ಕಳು ಹಾಗೂ ಹದಿಹರೆಯದವರು ಪೌಷ್ಠಿಕ ಆಹಾರದ ಮಹತ್ವವನ್ನು ಅರಿತುಕೊಳ್ಳುವುದು ಅತ್ಯಂತ ಅಗತ್ಯ. ಅಪೌಷ್ಠಿಕತೆಯನ್ನು ತಡೆಗಟ್ಟಲು ಸಮತೋಲಿತ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ರಕ್ತಹೀನತೆ ತಡೆಗಟ್ಟಲು ಪೌಷ್ಠಿಕ ಆಹಾರವನ್ನು ಕಡ್ಡಾಯವಾಗಿ ಸೇವಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಪ್ರಕಾಶ ವಿ. ಅವರು ಪೌಷ್ಠಿಕ ಆಹಾರದ ಕುರಿತು ಉಪನ್ಯಾಸ ನೀಡಿ, ಮಕ್ಕಳಲ್ಲಿ ಕಂಡುಬರುವ ರಕ್ತಹೀನತೆ, ಅಪೌಷ್ಠಿಕತೆ ಹಾಗೂ ಇತ್ತೀಚೆಗೆ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆಗೆ ಕಾರಣಗಳು ಮತ್ತು ಪರಿಹಾರೋಪಾಯಗಳ ಬಗ್ಗೆ ವಿವರಿಸಿದರು. ಪ್ರತಿದಿನ ವಿವಿಧ ಬಗೆಯ ತರಕಾರಿಗಳು ಮತ್ತು ಹಣ್ಣುಗಳನ್ನು ಸೇವಿಸುವುದರ ಜೊತೆಗೆ ಏಕದಳ, ದ್ವಿದಳ ಧಾನ್ಯಗಳು, ಹಾಲು ಮತ್ತು ಹಾಲಿನ ಉತ್ಪನ್ನಗಳು, ಮೊಟ್ಟೆ ಹಾಗೂ ಮಾಂಸವನ್ನು ಅಗತ್ಯ ಪ್ರಮಾಣದಲ್ಲಿ ಸೇವಿಸಬೇಕು. ಸಮತೋಲಿತ ಆಹಾರ ಸೇವನೆಯು ಉತ್ತಮ ಆರೋಗ್ಯಕ್ಕೆ ಆಧಾರವಾಗಿದೆ ಎಂದು ಹೇಳಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ್ ಎಂ.ಹೆಚ್. ಅವರು ಮಾತನಾಡಿ, ಪ್ರತಿಯೊಬ್ಬರಿಗೂ ಪೌಷ್ಠಿಕ ಆಹಾರ ಸೇವನೆ ಅತ್ಯಂತ ಮುಖ್ಯವಾಗಿದ್ದು, ಸೊಪ್ಪು, ಹಸಿರು ತರಕಾರಿಗಳು, ಹಾಲು, ಮೊಟ್ಟೆ ಹಾಗೂ ಸಿರಿಧಾನ್ಯಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಶಿವಾನಂದ ಎ.ಆರ್. ಅವರು ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಳ್ಳುವ ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಬಹಳ ಪ್ರಯೋಜನಕಾರಿಯಾಗಿವೆ. ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ತಮ್ಮ ಗ್ರಾಮಗಳು, ವಾರ್ಡ್ಗಳು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಲ್ಲಿ ಪೌಷ್ಠಿಕ ಆಹಾರದ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ನಗ