LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ದರ್ಶನ್ ಅಂಡ್ ಗ್ಯಾಂಗ್ ನಡೆಸಿದ ಹೀನ ಕೃತ್ಯಗಳು ಬೆಳಕಿಗೆ ಬರುತ್ತಿವೆ. ಕೃತ್ಯದಲ್ಲಿ ಬಂಧಿತನಾಗಿರುವ ಧನರಾಜ್ ಜೊತೆಗೆ ಆತನ ಸಹಚರರು ಎಲೆಕ್ಟ್ರಿಕಲ್ ಶಾಕ್ ನೀಡಿದ್ದರು ಎಂಬ ಸತ್ಯ ಸಂಗತಿಯೂ ಈಗ ಹೊರಬಿದ್ದಿದೆ.


ಪ್ರಕರಣದಲ್ಲಿ 9ನೇ ಆರೋಪಿಯಾಗಿರುವ ಧನರಾಜ್, ನಟ ದರ್ಶನ್ ಮನೆಯಲ್ಲಿ ಸಾಕು ನಾಯಿಗಳನ್ನ ನೋಡಿಕೊಳ್ಳುತ್ತಿದ್ದ. ಇದಕ್ಕೂ ಮೊದಲು ಧನರಾಜ್​ ಡಾಗ್ ಬ್ರೀಡಿಂಗ್ ಆಗಿದ್ದ. ದರ್ಶನ್ ಜೊತೆ ಆಪ್ತನಾದ ಬಳಿಕ ಇವರ ಮನೆಯಲ್ಲೇ ಕೆಲಸ ಮಾಡಿಕೊಂಡಿದ್ದ. ಧನರಾಜ್​ನನ್ನು ಬಂಧಿಸಿದ ಪೊಲೀಸರು ವಿಚಾರಣೆಯಲ್ಲಿ ಹಲವಾರು ಮಾಹಿತಿಗಳನ್ನು ಕಲೆ ಹಾಕಿದ್ದಾರೆ.


ಧನರಾಜ್ ಎಲೆಕ್ಟ್ರಿಕ್ ಶಾಕ್ ನೀಡುವ ಮೆಗ್ಗಾರ್ ಅನ್ನು ಹಲವಾರು ತಿಂಗಳಿಂದ ಇಟ್ಟುಕೊಂಡಿದ್ದ. ಫೈನಾನ್ಸ್ ಸರಿಯಾಗಿ ಕಟ್ಟದ ಹಲವರಿಗೆ ಬಂಧಿತ ಆರೋಪಿಯಾಗಿರುವ ವಿನಯ್ ಶೆಡ್​ನಲ್ಲಿ ಹಲ್ಲೆ ಮಾಡುತ್ತಿದ್ದ. ಈ ವೇಳೆ ಹಲ್ಲೆ ಮಾಡುವಾಗೆಲ್ಲಾ ಈ ಧನರಾಜ್​ ಜೊತೆಗೆ ಇರುತ್ತಿದ್ದ. ಈ ಹಿಂದೆ ಹಲವಾರು ಜನರಿಗೆ ಹಲ್ಲೆ ಮಾಡುವಾಗ ಇದೇ ಮೆಗ್ಗಾರ್​ನಿಂದ ಶಾಕ್ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್