Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು






ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ  ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.



ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.


ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

 



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ