ಬಳಿಕ ವೈಶಾಲಿ ಆರೋಗ್ಯವಾಗಿ ಇದ್ದರು ಎನ್ನಲಾಗಿದೆ. ಆದರೆ ಭಾನುವಾರ ಬೆಳಗ್ಗೆ ವೈಶಾಲಿಗೆ ಎದೆನೋವು ಕಾಣಿಸಿಕೊಂಡಿದ್ದು, ಐಸಿಯುಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ವೈಶಾಲಿ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ವೈಶಾಲಿ ಸಾವಿಗೆ ಕಾರಣ ಎಂದು ಕುಟುಂಬದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐದು ದಿನ ಹಿಂದಷ್ಟೇ ಆ್ಯನಿವರ್ಸರಿ ಆಚರಿಸಿಕೊಂಡಿದ್ದ ಮಹಿಳೆ
5 ದಿನದ ಹಿಂದಷ್ಟೇ ವೈಶಾಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಚೊಚ್ಚಲ ಹೆರಿಗೆ ಖುಷಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಈಗ ಏಕಾಏಕಿ ವೈಶಾಲಿ ಮೃತಪಟ್ಟಿರುವುದರಿಂದ, ರೊಚ್ಚಿಗೆದ್ದ ಕುಟುಂಬದವರು ಮೃತ ಬಾಣಂತಿ ಶವವನ್ನು ಪೋಸ್ಟ್ಮಾರ್ಟಂಗೆ ಕೊಟ್ಟಿರಲಿಲ್ಲ. ನಂತರ ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಂಎಲ್‌ಸಿ ಮಾಡಿಸಿ, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಮರಣೋತ್ತರ ಪರೀಕ್ಷೆ ನಡೆಸಿ ಬಾಣಂತಿ ಶವ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದಲ್ಲಿ ವೈಶಾಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು.
ವೈದ್ಯರ ವಿರುದ್ಧ ಆರೋಪ: ಪೋಸ್ಟ್ ಮಾರ್ಟಮ್ ರಿಪೋರ್ಟ್ನಲ್ಲಿ ಸಾವಿನ ಸತ್ಯ ಬಯಲಾಗಲಿದೆ. ಇತ್ತ ಯಾವುದೋ ಮಾತ್ರೆಗಳನ್ನು ನೀಡಿದ್ದಕ್ಕೆ ಈ ರೀತಿ ಆಗಿದೆ ಅಂತ ಕುಟುಂಬದರು ಆರೋಪಿಸಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ.