Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಕಿ 2898 AD ಚಿತ್ರದ  ಮತ್ತೊಂದು ಹೊಸ ವಿಡಿಯೋ ಬಿಡುಗಡೆ


     ಟಾಲಿವುಡ್‌ ಮಾತ್ರವಲ್ಲದೆ, ಇಡೀ ಭಾರತ 'ಕಲ್ಕಿ 2898 AD' ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಒಂದು ವಿಶೇಷತೆಗಳನ್ನು ಪ್ರೇಕ್ಷಕರಿಗೆ ನೀಡುತ್ತಲೇ  ಬರುತ್ತಿರುವ ಚಿತ್ರತಂಡ ಈಗ ಮತ್ತೊಂದು ವಿಶೇಷವನ್ನು ಅನಾವರಣಗೊಳಿಸಿದೆ.


ಹೌದು, ಪ್ಯಾನ್‍ ಇಂಡಿಯಾ ಸೂಪರ್‍ ಸ್ಟಾರ್‍ ಪ್ರಭಾಸ್‍ ಅಭಿನಯದ ಕಲ್ಕಿ ಚಿತ್ರದ ಐದನೇ ಸೂಪರ್‍ ಸ್ಟಾರ್ ಯಾರು ಎಂಬುದನ್ನು ಕಿರು ವಿಡಿಯೋ ಮೂಲಕ ಅನಾವರಣ ಮಾಡಲಾಗಿದೆ.


     ಆ ಐದನೇ ಸೂಪರ್‌ಸ್ಟಾರ್‌ ಬೇರಾರು ಅಲ್ಲ, ಬುಜ್ಜಿ ಹೆಸರಿನ ಆಪ್ತ ಸ್ನೇಹಿತ. ಅಂದರೆ, ಬುಜ್ಜಿಯನ್ನು ಭವಿಷ್ಯದ ವಾಹನ ಎಂದೇ ಚಿತ್ರತಂಡ ಹೇಳಿಕೊಂಡು, ಅದರ ಕಿರು ಝಲಕ್‌ಅನ್ನು  ಅನಾವರಣ ಮಾಡಿದೆ. ನಿರ್ದೇಶಕ ನಾಗ್ ಅಶ್ವಿನ್, ನಿರ್ಮಾಪಕರಾದ ಸಿ. ಅಶ್ವಿನಿ ದತ್, ಸ್ವಪ್ನಾ ದತ್ ಚಲಸಾನಿ, ಪ್ರಿಯಾಂಕಾ ದತ್ ಚಲಸಾನಿ ಸೇರಿ ಸುಮಾರು ಇಪ್ಪತ್ತು ಸಾವಿರ ಪ್ರೇಕ್ಷಕರು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬುಜ್ಜಿಯನ್ನು ಪರಿಚಯಿಸಿದ್ದಾರೆ.


     ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿದೆ. ವಿಡಿಯೋದಲ್ಲಿ ಬುಜ್ಜಿ ಹೇಗೆಲ್ಲ ಕೆಲಸ ಮಾಡುತ್ತೆ, ಭವಿಷ್ಯದ ಆಪ್ತ ಸ್ನೇಹಿತ ಎಂದು ಏಕೆ ಕರೆಯಲಾಗುತ್ತದೆ ಎಂಬುದು ಗೋಚರವಾಗುತ್ತದೆ.


     ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ