ರಾಮನಗರ, ಸೆ.19: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರ ವಿರುದ್ಧ ಒಕ್ಕಲಿಗ, ದಲಿತ ಸಂಘಟನೆಗಳು ಸರಣಿ ಪ್ರತಿಭಟನೆ ಮಾಡ್ತಿವೆ. ಕಾಂಗ್ರೆಸ್‌ಗೆ ಈ ಪ್ರಕರಣ ಅಸ್ತ್ರವಾಗಿ ಸಿಕ್ಕಿದೆ. ಆದರೆ ಇದೀಗ ಇದರ ನಡುವೆ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.
R.R.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡಿವೈಎಸ್ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಇಂದು ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ. ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿದೆ. ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ. 354 a, 354 c, 376(2), 308, 406, 384, 120b 504, 506, 149 IPC ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.