LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಬಳ್ಳಾರಿಯಲ್ಲಿ ಬಾಲಕಾರ್ಮಿಕ ವಿರೋಧಿ ಕಾರ್ಯಾಚರಣೆ: ಇಬ್ಬರು ಮಕ್ಕಳ ರಕ್ಷಣೆ

ಬಳ್ಳಾರಿ,ಆ.20 ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಜಂಟಿ ಸಹಯೋಗದಲ್ಲಿ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಗಿದ್ದು, ಕೆಲಸದಲ್ಲಿ ತೊಡಗಿದ್ದ ಇಬ್ಬರು ಬಾಲ/ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.
ದೇಶವ್ಯಾಪಿ ನಡೆಯುತ್ತಿರುವ ‘ಪ್ಯಾನ್-ಇಂಡಿಯಾ ರಕ್ಷಣಾ ಮತ್ತು ಪುನರ್ವಸತಿ ಅಭಿಯಾನ’ದ ಅಂಗವಾಗಿ, ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರ ಅಧ್ಯಕ್ಷತೆಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿದ ನಂತರ ಮಂಗಳವಾರ ನಗರದ ವಿವಿಧೆಡೆ ದಾಳಿ ನಡೆಸಲಾಯಿತು.
ಟಾಸ್ಕ್ಫೋರ್ಸ್ ತಂಡವು ಬಳ್ಳಾರಿ ನಗರದ ಎಂ.ಜಿ. ಹತ್ತಿರದ ಪಟೇಲ್ ನಗರ, ಅನಂತಪುರ ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿರುವ ವಾಣಿಜ್ಯ ಮಳಿಗೆ ಹಾಗೂ ಉದ್ದಿಮೆಗಳ ಮೇಲೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿತು. ಈ ವೇಳೆ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಮಕ್ಕಳನ್ನು ಗುರುತಿಸಿ ರಕ್ಷಿಸಲಾಯಿತು. ಸ್ಥಳದಲ್ಲೇ ಮಕ್ಕಳಿಂದ ಅಗತ್ಯ ಹೇಳಿಕೆಗಳನ್ನು ಪಡೆದು, ಮುಂದಿನ ರಕ್ಷಣೆ ಮತ್ತು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ.
ಇದೇ ಸಂದರ್ಭದಲ್ಲಿ ಉದ್ದಿಮೆ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ವಿತರಿಸುವ ಮೂಲಕ ಬಾಲಕಾರ್ಮಿಕ ಕಾಯ್ದೆಯ ಕುರಿತು ಜಾಗೃತಿ ಮೂಡಿಸಲಾಯಿತು.
ಈ ವಿಶೇಷ ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ಪರಶುರಾಮ್ (2ನೇ ವೃತ್ತ) ಹಾಗೂ ರಮೇಶ್ (1ನೇ ವೃತ್ತ), ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಆರೋಗ್ಯ ಇಲಾಖೆಯ ಮುಷ್ತಾಕ್ ಅಹಮದ್ ಹಾಗೂ ಗೋವಿಂದಪ್ಪ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಪ್ರಶಾಂತ್ ಕುಮಾರ್, ಸಿ.ಆರ್.ಪಿ ಮನ್ಸೂರ್ ಅಹಮದ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನಿಲೋಫಿಯಾ, ಮಕ್ಕಳ ಸಹಾಯವಾಣಿಯ ಕಿರಣ್ ಮತ್ತು ಆನಂದ್, ರೀಚ್ ಸಂಸ್ಥೆಯ ಸಂಯೋಜಕಿ ಬಸಮ್ಮ, ಪ್ಯಾರಾ ಲೀಗಲ್ ಸ್ವಯಂಸೇವಕಿ ಲಕ್ಷಿö್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪ