ರಾಮದುರ್ಗ,ಜು,೦೧: ತಾಲೂಕಿನ ಕಲಹಾಳ ಸರಕಾರಿ ಪ್ರೌಢಶಾಲೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಇವರ ಸಹಯೋಗದಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ರೈತ ಮುಖಂಡ ಶಂಕರಗೌಡ ಪಾಟೀಲ ಹಾಗೂ ಸರಕಾರಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಹನಮಂತ ಮಡಿವಾಳರ ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳು, ಅವುಗಳಿಂದ ಉಂಟಾಗುವ ಆರೋಗ್ಯ, ಸಾಮಾಜಿಕ ಹಾಗೂ ಆರ್ಥಿಕ ಸಮಸ್ಯೆಗಳ ಕುರಿತು ಅರಿವು ಮೂಡಿಸಲಾಯಿತು. ಮಾದಕ ವ್ಯಸನದಿಂದ ದೂರವಿದ್ದು, ಆರೋಗ್ಯಕರ ಜೀವನವನ್ನು ನಡೆಸುವಂತೆ ಕರೆ ನೀಡಲಾಯಿತು.
ಶಾಲೆಯ ಶಿಕ್ಷಕರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಪ್ರತಿನಿಧಿಗಳು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ಅಪಾಯಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಇಲ್ಲ ಎನ್ನೋಣ ಆರೋಗ್ಯಕರ ಸಮಾಜವನ್ನು ಕಟ್ಟೋಣ ಎಂಬ ಘೋಷಣೆಯೊಂದಿಗೆ ಜಾಗೃತಿ ಪ್ರತಿಜ್ಞೆ ಸ್ವೀಕರಿಸಿದರು. ಅಲ್ಲದೇ ಏಕಕಾಲಕ್ಕೆ ರಾಜ್ಯಾದ್ಯಂತ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಶಾಲೆಯ ಸುಮಾರು ೧೨೦ ಮಕ್ಕಳು ಪಾಲ್ಗೊಂಡಿದ್ದರು.
ಪೋಲೀಸ್ ಇಲಾಖೆಯ ಮಲ್ಲಪ್ಪ ಗಂಟಿ, ಶಾಲೆಯ ಮುಖ್ಯೋಪಾಧ್ಯಾಯ ಐ.ಎಂ. ವಜ್ರಮಟ್ಟಿ, ಶಿಕ್ಷಕರಾದ ಎಸ್.ಕೆ. ಕರಿಮರಿ, ಎಸ್.ಎಂ. ಪೋಳ್, ಅತಿಥಿ ಶಿಕ್ಷಕರಾದ ಸವಿತಾ ಅಂಗಡಿ, ಪ್ರತಿಮಾ ಕಟ್ಟಿ, ಪ್ರವೀಣ ಗುರುಬಸನ್ನವರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮೇಲ್ವಿಚಾರಕ ಪ್ರದೀಪ ಕೆ.ಕೆ, ಗಂಗಮ್ಮ ಕಪಲಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದು. ಶಿಕ್ಷಕ ಎಸ್.ಎಫ್. ಪೂಜಾರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಆರ್. ಅಂಗಡಿ ವಂದಿಸಿದರು.