ಬಾಗಲಕೋಟೆ, ಮೇ ೨೧ : ಭಯೋತ್ಪಾದನಾ ವಿರೋಧಿ ದಿನ ಅಂಗವಾಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಸಂಗಪ್ಪ ಅವರು ಪ್ರತಿಜ್ಞಾ ವಚನ ಬೋಧಿಸಿದರು.
ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ, ಭಾರತದ ಪ್ರಜೆಗಳಾದ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಪ್ರತಿಜ್ಞೆ ಮಾಡಲಾಯಿತು. ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಚಿದ್ದಕಾರಿ ಶಕ್ತಿಗಳ ವಿರುದ್ದ ಹೋರಾಡಲು ನಾವು ಪಣ ತೊಡುವುದಾಗಿ ಪ್ರತಿಜ್ಞೆ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
