LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ರೈತರಿಗೆ ಸಮರ್ಪಕ, ಗುಣಮಟ್ಟದ ವಿದ್ಯುತ್ ಪೂರೈಕೆಗೆ ಮನವಿ

 ಬೀಳಗಿ-  ಬಾಗಲಕೋಟೆ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರ ಬಿತ್ತಿದ ಬೆಳೆಗಳನ್ನು ರಕ್ಷಿಸಲು  ಸಮಯಕ್ಕೆ ಸರಿಯಾಗಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಎನ್‌ಟಿಪಿಸಿ ಹಾಗೂ ಸಕ್ಕರೆ ಕಾರ್ಖಾನೆಗಳಿಂದ ಮತ್ತು ವಿಂಡ್ ಪವರ, ಸೋಲಾರ್ ನಿಂದ ಉತ್ಪಾದನೆಯಾಗುವ ವಿದ್ಯುತ್‌ನ್ನು ಸೂಕ್ತ ವ್ಯವಸ್ಥೆಯ ಮೂಲಕ ಗ್ರಿಡ್‌ಗೆ ಪಡೆದು, ಜಿಲ್ಲೆಯ ಕೃಷಿ ಪಂಪ್‌ಸೆಟ್‌ಗಳಿಗೆ ಆದ್ಯತೆಯ ಮೇರೆಗೆ ಪೂರೈಸಬೇಕು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಸರಕಾರಕ್ಕೆ ಒತ್ತಾಯಿಸಿದರು.
 
ಭಾರತೀಯ  ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಆಡಳಿತ ಸೌಧಕ್ಕೆ ಆಗಮಿಸಿ ಗ್ರೇಡ್ 2 ತಹಶೀಲ್ದಾರ ಸಂಗಮೇಶ ಚರಂತಿಮಠ ಹಾಗೂ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ ಬೂಕೆ ಮೂಲಕ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ  ವಿದ್ಯುತ್ ಸಮಸ್ಯೆ ನಿವಾರಣೆಗೆ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಮನವಿ ಸಲ್ಲಿಸಿದರು.
   ಆರ್‌ಟಿಪಿಎಸ್, ಬಿಟಿಪಿಎಸ್ ಸೇರಿದಂತೆ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಉತ್ಪಾದನಾ ಸಮಸ್ಯೆ ಇದ್ದಲ್ಲಿ ಪರ್ಯಾಯ ಮೂಲಗಳಿಂದ ವಿದ್ಯುತ್ ಖರೀದಿಸಿ ಕೃಷಿ ಬಳಕೆಗೆ ವಿದ್ಯುತ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಕೃಷಿ ವಿದ್ಯುತ್ ಪೂರೈಕೆಯಲ್ಲಿ ಲೋಡ್‌ಶೆಡ್ಡಿಂಗ್ ಅಥವಾ ವ್ಯತ್ಯಯ ಉಂಟಾದರೆ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಹಾಗೂ ನಿಗದಿತ ಸಮಯದಲ್ಲಿ ವಿದ್ಯುತ್ ಪೂರೈಕೆ ಖಚಿತಪಡಿಸಬೇಕು ಎಂದು ಹಿರೇಮಠ ಆಗ್ರಹಪಡಿದರು.
ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ  ಫೀಡರ್‌ಗಳು, ವಿದ್ಯುತ್ ಪರಿವರ್ತಕಗಳು, ಕಂಬಗಳು ಹಾಗೂ ತಂತಿಗಳಲ್ಲಿ ಉಂಟಾಗುವ ದೋಷಗಳನ್ನು ತುರ್ತುಗತಿಯಲ್ಲಿ ದುರಸ್ತಿ ಮಾಡಬೇಕು, ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು  ಜಿಲ್ಲೆಗೆ ವಿಶೇಷ ಕೃಷಿ ವಿದ್ಯುತ್ ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು.ವಿದ್ಯುತ್ ಕೊರತೆ ಅಥವಾ ತಾಂತ್ರಿಕ ಕಾರಣಗಳನ್ನು ನೆಪ ಮಾಡಿಕೊಂಡು ಕೃಷಿ ವಿದ್ಯುತ್ ಪೂರೈಕೆಯಲ್ಲಿ ಅನಗತ್ಯ ವ್ಯತ್ಯಯ ಉಂಟಾಗದಂತೆ ಹೆಸ್ಕಾಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದರು.
ಈಗಾಗಲೇ ಬಿತ್ತನೆ ಮಾಡಿರುವ ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲು ತಕ್ಷಣ ವಿಶೇಷ ವಿದ್ಯುತ್ ಪೂರೈಕೆ ಮಾಡಿ, ರೈತರಿಗೆ ಬೆಳೆಗಳಿಗೆ ನೀರು ಹಾಯಿಸಲು ಅನುಕೂಲ ಮಾಡಿಕೊಡಬೇಕು.ಮೂರು ದಿನಗಳ ಗಡುವಿನೊಳಗೆ ಕೃಷಿ ವಿದ್ಯುತ್ ಪೂರೈಕೆಯನ್ನು ಸಮರ್ಪಕಗೊಳಿಸದಿದ್ದರೆ, ಭಾರತೀಯ ಕಿಸಾನ ಸಂಘದ ನೇತೃತ್ವದಲ್ಲಿ ರೈತರನ್ನು ಸಂಘಟಿಸಿ ಕಾತರಕಿ ಮತ್ತು ಬೀಳಗಿ ವಿದ್ಯುತ್ ಸ್ಟೇಷನ್‌ಗೆ ಮುತ್ತಿಗೆ ಹಾಕಿ ತೀವ್ರ ಪ್ರತಿಭಟನೆ ನಡೆಸಲಾಗುವುದು
ಮಲ್ಲಪ್ಪ ಗಾಣಿಗೇರ ತಾಲೂಕು ಅಧ್ಯಕ್ಷರು ಬಿ.ಕೆ.ಎಸ್ ಬೀಳಗಿ ಈ ಸಂದರ್ಭದಲ್ಲಿ ಗೋಪಾಲ ಕಮ್ಮನ್ನವರ,ಸಂಗನಗೌಡ ಪಾಟೀಲ, ಅಬ್ದುಲ್‌ ಹಲವಾಯಿ, ಜಂಗಪ್ಪ ಕಲ್ಲಾರಿ ಡೋಂಗ್ರಿಸಾಬ ನದಾಪ, ಹಣಮಂತ ದೊರೆಗೊಳ ಅಜಿತ ನಾಯಕ ಸೇರಿದಂತೆ ಅನೇಕರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹ