Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಫ್‍ಕೆಸಿಸಿಐ 98ನೇ ವಾರ್ಷಿಕ ಸಭೆಯಲ್ಲಿ, ಜಿಲ್ಲೆಯ ಮೂಲಭೂತ ಸೌಲಭ್ಯಗಳಿಗಾಗಿ ಮನವಿ

ಬಳ್ಳಾರಿ, ನ. 29:ನವದೆಹಲಿಯಲ್ಲಿ ಫೇಡರೇಷನ್ ಆಫ್ ಇಂಡಿಯನ್ ಚೇಂಬರ್ಸ್‍ನ 98ನೇ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಪಾಲ್ಗೊಂಡಿದ್ದ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಜಿಲ್ಲೆಯ ಮೂಲಭೂತ ಸೌಲಭ್ಯಗಳ ಈಡೇರಿಕೆಗೆ ಕೋರಿ ಮನವಿ ಸಲ್ಲಿಸಿದೆ.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಮತ್ತು ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರ ನೇತೃತ್ವದಲ್ಲಿ ಎರೆಡು ದಿನಗಳ ಕಾಲ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರತಿನಿಧಿಗಳು, ಬಳ್ಳಾರಿ ನಗರದ ಮೂಲಭೂತ ಸೌಲಭ್ಯಗಳಾದ ತುಂಗಭದ್ರ ಜಲಾಶಯದ ಕ್ರಸ್ಟ್‍ಗೇಟ್‍ಗಳ ಅಳವಡಿಕೆ, ವಿಮಾನ ನಿಲ್ದಾಣ, ರೈಲ್ವೆ ಅಭಿವೃದ್ಧಿ, ರೈಲ್ವೆಯ ಹೊಸ ಮಾರ್ಗಗಳ ಪ್ರಾರಂಭ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಹೊಸ ಕೈಗಾರಿಕೆಗಳ ಪ್ರಾರಂಭ, ವ್ಯಾಪಾರ ಮತ್ತು ವಾಣಿಜ್ಯೋದ್ಯಮಿಗಳ - ಬಂಡವಾಳ ಹೂಡಿಕೆದಾರರ ಸ್ನೇಹಿ ನೀತಿಗಳು ಮತ್ತು ಕಾನೂನುಗಳ ಜಾರಿ ಹಾಗು ತೆರಿಗೆ ಸರಳೀಕರಣ ಸೇರಿ ವಿವಿಧ ಮೂಲಭೂತ ಸೌಲಭ್ಯಗಳ ಈಡೇರಿಕೆಗೆ ಮನವಿ ಸಲ್ಲಿಸಿದ್ದಾರೆ.

ಅಲ್ಲದೇ, ಕೇಂದ್ರ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖಾವಾರ ಸಚಿವರು ಮತ್ತು  ಅಧಿಕಾರಿಗಳ ಮೇಲೆ ಒತ್ತಡ ಹೇರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಫೇಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್‍ನ ಅಧ್ಯಕ್ಷರಾದ ಹರ್ಷವರ್ಧನ್ ಅಗರ್‍ವಾಲ್, ಪ್ರಸ್ತಾವಿತ ಅಧ್ಯಕ್ಷರಾದ ಅನಂತ ಗೋಯಂಕ್, ಎಫ್‍ಕೆಸಿಸಿಐ ಬೆಂಗಳೂರಿನ ಅಧ್ಯಕ್ಷರಾದ ಶ್ರೀಮತಿ ಉಮಾರೆಡ್ಡಿ, ಕರ್ನಾಟಕ ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷರಾದ ಜಿ.ಕೆ. ಆದಪ್ಪಗೌಡರ್ ಹಾಗೂ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ, ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಜಂಟಿ ಕಾರ್ಯದರ್ಶಿಗಳಾದ, ವಿ.ರಾಮಚಂದ್ರ, ಖಜಾಂಚಿಗಳಾದ ನಾಗಳ್ಳಿ ರಮೇಶ್, ಕಾರ್ಯಕಾರಿ ಸಮಿತಿ ಸದಸ್ಯರಾದ ಸಿಎ ಕೆ. ರಾಜಶೇಖರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ