ಕಾಗವಾಡ : ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ 'ಭಾರತ್ ಜೋಡೋ' ಯುವ ಸಂಘಗಳನ್ನು ಸ್ಥಾಪಿಸಿ ನೋಂದಣಿ ಮಾಡಿಸಲು ಆಸಕ್ತಿಯುಳ್ಳ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಪ್ರಸನ್ ಕಲ್ಯಾಣಶೆಟ್ಟಿ ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ಸರಾಸರಿ 4,000 ಜನಸಂಖ್ಯೆಗೆ ಒಂದರಂತೆ ಕಾಗವಾಡ ಪಟ್ಟಣದ ವ್ಯಾಪ್ತಿಯಲ್ಲಿ ಒಟ್ಟು 3 ಯುವ ಸಂಘಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.ಯುವ ಸಂಘಗಳ ಕಾರ್ಯಚಟುವಟಿಕೆಗಳಿಗೆ ಶಾಲಾ-ಕಾಲೇಜುಗಳ ಸ್ಥಳಗಳನ್ನು ಗುರುತಿಸಲಾಗಿದೆ.
ನೋಂದಣಿಯಾಗುವ ಪ್ರತಿ ಯುವ ಸಂಘದ ಕಾರ್ಯಚಟುವಟಿಕೆಗಳಿಗೆ ಸರ್ಕಾರದಿಂದ ರು.10 ಲಕ್ಷ ಅನುದಾನ ನೀಡಲಾಗುವುದು. 16ರಿಂದ 35 ವರ್ಷದೊಳಗಿನ ಅದೇ ವಾರ್ಡ್ ಸ್ಥಳೀಯ ಸಾಮಾನ್ಯ ನಿವಾಸಿಗಳು ಸಂಘದ ಸದಸ್ಯರಾಗಲು ಅರ್ಹರಾಗಿರುತ್ತಾರೆ.
ಬಿಜಿವೈಎಸ್ ಪೋರ್ಟಲ್ ಅಥವಾ ಮೊಬೈಲ್ ಆ್ಯಪ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಪ್ರತಿ ಸದಸ್ಯರಿಗೆ ರು.10 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ. ನಗರ ವಾಪಿಯ ಅರ್ಹ ಯುವಕರು ಹೆಚ್ಚಿನ ಸಂಖ್ಯೆಯಲಿ ನೋಂದಾಯಿಸಿ