‘ಸಹಕಾರ ರತ್ನ’ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಅ.28 ಪ್ರಸ್ತಕ ಸಾಲಿಗೆ ರಾಜ್ಯ ಸರ್ಕಾರವು ಶ್ರೇಷ್ಠ ಸಹಕಾರಿಗಳಿಗಳನ್ನು ಗುರುತಿಸಿ ‘ಸಹಕಾರಿ ರತ್ನ’ ಪ್ರಶಸ್ತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಸಹಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರುವ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ನಿವಾಸಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವುದರ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಪೂರಕ ಮಾಹಿತಿಯನ್ನು ಅಗತ್ಯ ದಾಖಲೆಗಳೊಂದಿಗೆ ಬಳ್ಳಾರಿಯ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಗೆ ಅಕ್ಟೋಬರ್ 30 ರ ಸಂಜೆ 05.30 ರೊಳಗಾಗಿ ಸಲ್ಲಿಸಬೇಕು ಎಂದು ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.