LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ


ಬಳ್ಳಾರಿ,ಸೆ.೧೭:: ಪ್ರಸ್ತಕ ಸಾಲಿನಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ (ಎಸ್‌ಟಿ) ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನೀತರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅರ್ಹರು ಅರ್ಜಿ ಸಲ್ಲಿಸಬಹುದು. ಅರ್ಹ ಸಾಧಕರನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅ.೨೬ ರಂದು ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರಶಸ್ತಿಯನ್ನು ನೀಡಲಾಗುತ್ತದೆ.
ಆಸಕ್ತರು ನಗರದ ವಾಲ್ಮೀಕಿ ಭವನ ಆವರಣದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ನಿಗದಿತ ನಮೂನೆಯ ಅರ್ಜಿ ಪಡೆದು ಭರ್ತಿಮಾಡಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆ.೩೦ ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಲ್ಲಚೇರುವು ಪ್ರದೇಶ ಹತ್ತಿರದ ವಾಲ್ಮೀಕಿ ಭವನ ಆವರಣದಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.೦೮೩೯೨-೨೪೨೪೫೩, ಮೊ.೮೫೪೮೦೯೬೪೬೮ ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಗರದ 76 ಮನೆಗಳಿಗೆ ಪ್ರಧಾನಿ ನಮೋ ಹುಟ್ಟುಹಬ್ಬದ ಪ್ರಯುಕ್ತ ದೀಪ ವಿತರಣೆಭರವಸೆ ನೀಡಿದಂತೆ ಎರಡನೇ ಹಂತದ ಅನುದಾನದ ಚೆಕ್ ಹಸ್ತಾಂತರಿಸಿದ ಲಕ್ಷ್ಮೀ ಹೆಬ್ಬಾಳಕರ್ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ ಮೂರು ದಿನಗಳ ಕಾಲ ಬಳ್ಳಾರಿ ಧ್ಯಾನ ಮಹಾಯಜ್ಞ 10 : ಕಾರ್ಯಕ್ರಮ ತಂತ್ರಜ್ಞಾನ ಕ್ಷೇತ್ರದಲ್ಲಿ ಸರ್ ಎಂವಿ ಅವರ ಕೊಡುಗೆ ಅಪಾರವಾದದ್ದು :  ಎಚ್ ಮಹಾಬಲೇಶ್ವರ ಕೇಂದ್ರ ಸಾಂಖ್ಯಿಕ ಕಚೇರಿ ಪ್ರಾದೇಶಿಕ ಕ್ರೀಡಾಕೂಟ: ಬಳ್ಳಾರಿಗೆ ಕ್ರಿಕೆಟ್, ಹುಬ್ಬಳ್ಳಿಗೆ ಬ್ಯಾಡ್ಮಿಂಟನ್ ಪ್ರಶಸ್ತಿಬಳ್ಳಾರಿ ಜಿಲ್ಲೆಯಲ್ಲಿ ಗಣೇಶ ಹಬ್ಬಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್: ಡಿಜೆ ಸೌಂಡ್ ಸಿಸ್ಟಮ್ ಹಾಗೂ ಮದ್ಯ ಮಾರಾಟಕ್ಕೆ ನಿಷೇಧಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸರ್ವಜ್ಞ ವಿದ್ಯಾಪೀಠ ವಿದ್ಯಾರ್ಥಿಗಳ ಸಾಧನೆ ಸಕಾಲಕ್ಕೆ ಸಾಲ ಮರುಪಾವತಿಸಿ ಸಂಘದ ಅಭಿವೃದ್ಧಿಗೆ ಸಹಕರಿಸಿ: ಬಸನಗೌಡ