ಬಳ್ಳಾರಿ, ಮೇ.02.: ಇತ್ತೀಚಿನ ದಿನಗಳಲ್ಲಿ ಮಹಿಳಾ ಪೊಲೀಸ್ ಸ್ಟೇಷನ್ ನಲ್ಲಿ ಮಹಿಳಾ ಸಿಬ್ಬಂದಿಗಳ ಸಂಖ್ಯೆ ಕಡಿಮೆಯಾಗಿದ್ದು ಇದರಿಂದ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತಿತರ ಸಮಸ್ಯೆಗಳ ಬಗ್ಗೆ ಪುರುಷ ಪೊಲೀಸ್ ಅಧಿಕಾರಿಗಳೊಂದಿಗೆ ಹೇಳಿಕೊಳ್ಳಲು ಮಹಿಳೆಯರಿಗೆ ಕಷ್ಟವಾಗಿದೆ. ಅಲ್ಲದೆ ಮಹಿಳೆಯರ ಸಮಸ್ಯೆಗಳು ಪರಿಹಾರವಾಗಬೇಕಾದರೆ ಹಣಕಾಸಿನ ವ್ಯವಹಾರಗಳು ನಡೆಯುತ್ತಿವೆ. ಮಹಿಳಾ ಸಮಸ್ಯೆಗಳು ಬಗೆಹರಿಸಲು ಮಹಿಳಾ ಪೊಲೀಸ್ ಸ್ಟೇಷನ್ ಹೆಸರಿಗಷ್ಟೇ ಸೀಮಿತವಾಗಿದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದ್ದು ಹಣವಿಲ್ಲದೆ ಕೆಲಸಗಳು ನಡೆಯುವುದು ಕಷ್ಟವಾಗಿದೆ.
ಪೊಲೀಸ್ ಸ್ಟೇಷನ್ ಸುತ್ತಮುತ್ತ ಮಹಿಳೆಯರಿಗಿಂತ ಪುರುಷರ ಸಂಖ್ಯೆ ಹೆಚ್ಚಾಗಿರುತ್ತದೆ. ಎಲ್ಲ ಸಮಸ್ಯೆಗಳ ಗಮನಹರಿಸಿ ಬಗೆಹರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ಈ ಸಂದರ್ಭಧಲ್ಲಿ ಸಂಘಟನೆಯ ಚಂದ್ರಕುಮಾರಿ ವರಲಕ್ಷ್ಮಿ, ಟಿ.ಈರಮ್ಮ, ಜಿಲ್ಲಾ ಸಮಿತಿ ಸದಸ್ಯರು, ತಾಲ್ಲೂಕು ಸಮಿತಿ ಸದಸ್ಯರು ಉಪಸ್ಥಿತರಿದ್ದರು.