Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ತಾಲೂಕು ಘಟಕಗಳಿಗೆ ಅಧ್ಯಕ್ಷರ ನೇಮಕ

ಬಳ್ಳಾರಿ ಮೇ,08 ಜಿಲ್ಲಾ ಜೆಡಿಎಸ್ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಮೀನಳ್ಳಿ ತಾಯಣ್ಣ ರವರ ನೇತೃತ್ವದಲ್ಲಿ ತಾಲ್ಲೂಕು ಅಧ್ಯಕ್ಷರುಗಳನ್ನು ನೂತನವಾಗಿ ಆಯ್ಕೆ ಮಾಡಿ ಮತ್ತು ನೇಮಕಾತಿ ಆದೇಶ ಪತ್ರವನ್ನು ವಿತರಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. 
ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ ಮರು ಆಯ್ಕೆಯಾಗಿರುವ ಏಳ್ಕೆ ಮೇಘರಾಜ ರವರು, ಮತ್ತು ಸಂಡೂರು ವಿಧಾನ ಸಭಾ ಕ್ಷೇತ್ರಕ್ಕೆ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಶ್ರೀ ಹೊಸಿಗೇರಪ್ಪರವರು, ಸಿರುಗುಪ್ಪ ತಾಲ್ಲೂಕು ಅಧ್ಯಕ್ಷರನ್ನಾಗಿ ಶಿವನಾರಾಯಣರವರು, ಜಿಲ್ಲಾ ಉಪಾಧ್ಯಕ್ಷರನ್ನಾಗಿ ರಾಮಾಂಜೀನಿಯವರನ್ನು, ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದ ಯುವ ಘಟಕದ ಅಧ್ಯಕ್ಷರನ್ನಾಗಿ ಭರತ್ ಕುಮಾರ್ ರವರನ್ನು ಆಯ್ಕೆ ಮಾಡಿ  ಎಲ್ಲಾರಿಗೂ ಆದೇಶ ಪತ್ರವನ್ನು ವಿತರಿಸಲಾಯಿತು, ಮತ್ತು ಮುಂದೆ ಬರುವ  ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಸೋಮಪ್ಪ ಕುರೆಕುಪ್ಪ, ಯಲ್ಲನಗೌಡ, ವಿಜಯ್ ಕುಮಾರ್ ಮಧುರೈ ಜಿಲ್ಲಾ ಕಾಯ೯ಧ್ಯಕ್ಷರು, ರಾಮಾಂಜೀನಿ ಉಪಾಧ್ಯಕ್ಷರು, ಬಾಷಾ ಉಪಾಧ್ಯಕ್ಷರು, ಮಲ್ಲಿಕಾರ್ಜುನ ಉಪಾಧ್ಯಕ್ಷರು, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಪುಷ್ಪಾ.ಜೆ, ಶಿವಗಂಗಾ, ವಿಜಯ, ಶಮೀಮ್ ಬಾನು, ರಮಾದೇವಿ ಮತ್ತು ಪಕ್ಷದ ಇತರ ಕಾಯ೯ಕತ೯ರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST