Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

“ಗವಿಮಠ ಪ್ರತಿಷ್ಠಾನದ ಕಾರ್ಯಕ್ಕೆ ಶ್ಲಾಘನೆ”



ಜಮಖಂಡಿ,ಎ,೧೫ : ಎಲೆ ಮರೆ ಕಾಯಿಯಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡುವ ಶಿಕ್ಷಕರನ್ನು ಹುಡುಕಿ ಸತತ ೨೬ ವರ್ಷಗಳಿಂದ ಶಿಕ್ಷಕರಿಗೆ ಪ್ರಶಸ್ತಿ ನೀಡುತ್ತಿರುವ ಮಧುರಖಂಡಿಯ ಗವಿಮಠ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ ಎಂದು ವಿಜಯಪೂರ ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಅಭಿಪ್ರಾಯ ಪಟ್ಟರು.


ತಾಲೂಕಿನ ಮಧುರಖಂಡಿ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಗವಿಮಠ ಪ್ರತಿಷ್ಠಾನ, ಕನ್ನಡ ಸಾಹಿತ್ಯ ಪರಿಷತ್ತು ಬಾಗಲಕೋಟೆ, ಕನ್ನಡ ಸಾಹಿತ್ಯ ಪರಿಷತ್ತು ಜಮಖಂಡಿ, ಹುನಗುಂದ, ಇಲಕಲ್ ವತಿಯಿಂದ ಲಿಂ. ಕೊಟ್ರಯ್ಯ ಗವಿಮಠ, ಲಿಂ. ಪಂಪಾವತಿ ಗವಿಮಠ ಅವರ ಹೆಸರಿನಲ್ಲಿ ದತ್ತಿನಿಧಿ ಉಪನ್ಯಾಸ, ಶಿಕ್ಷಕ-ಶಿಕ್ಷಕಿಯರಿಗೆ ಪ್ರಶಸ್ತಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನೂ ಗವಿಮಠ ಪರಿವಾರದ ಶಿಕ್ಷಕರ ಮಾರ್ಗದರ್ಶನದಲ್ಲಿ ಬೆಳೆದಿದ್ದು, ಕೆ.ಎ.ಎಸ್. ಪರೀಕ್ಷೆ ಪಾಸಾಗಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಸಾಧನೆಗೆ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಹೇಳಿದರು.


ದತ್ತಿನಿಧಿ ಉಪನ್ಯಾಸಕರಾಗಿ ಆಗಮಿಸಿದ್ದ ವಿಜಯಪೂರದ ಸಾಹಿತಿ ಶಂಕರ ಬೈಚಬಾಳ ಮಾತನಾಡಿ, ಓದು-ಬರಹ ಬಾರದ ಜನಪದರು ತಮ್ಮ ಸಾಹಿತ್ಯದ ಮೂಲಕ ಬದುಕಿನ ಮೌಲ್ಯಗಳನ್ನು ಬಿತ್ತಿದ್ದರು. ಆದರೆ ಇಂದು ಸಮಾಜದ ವಿವಿಧ ಕ್ಷೇತ್ರದ ಕೆಲವು ಪ್ರಖ್ಯಾತರು ಹಣಕ್ಕಾಗಿ ಮೌಲ್ಯಗಳನ್ನು ನಾಶ ಮಾಡುತ್ತಿರುವುದು ಖೇದದ ಸಂಗತಿ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಾಗಲಕೋಟ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶಿವಾನಂದ ಶೇಲ್ಲಿಕೇರಿ ಮಾತನಾಡಿ, ಹೆತ್ತ ವೃದ್ಧ ತಂದೆ-ತಾಯಿಗಳನ್ನು ವೃದ್ದಾಶ್ರಮಕ್ಕೆ ಸೇರಿಸುತ್ತಿರುವ ಇಂದಿನ ಕಾಲದಲ್ಲಿ ಕಳೆದ ೨೬ ವರ್ಷಗಳಿಂದ ತಂದೆ-ತಾಯಿಗಳ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುತ್ತಾ ಮುಂದಿನ ಪೀಳಿಗೆಗೆ ಗವಿಮಠ ಸಹೋದರರು ಸ್ಪೂರ್ತಿಯಾಗಿದ್ದಾರೆ ಎಂದರು.


ಇದೆ ಸಂದರ್ಭದಲ್ಲಿ ಹುನಗುಂದ ನಿವೃತ್ತ ಶಿಕ್ಷಕ ಶ್ಯಾಮ ಕುಲಕರ್ಣಿ ಶಿಕ್ಷಕರಿಗಾಗಿ ಕಡಿಮೆ ಖರ್ಚಿನ ವಿಜ್ಞಾನ ಪ್ರಯೋಗಗಳು ಹಾಗೂ ವಿಶೇಷ ಗೋಂಬೆ ಪ್ರದರ್ಶನವನ್ನು ನೀಡಿ, ವಿಜ್ಞಾನ ಹಾಗೂ ಗಣಿತ ವಿಷಯಗಳನ್ನು ಮನರಂಜನೆಯ ಮೂಲಕ ತಿಳಿಸಿದಾಗ ಮಕ್ಕಳಲ್ಲಿ ಆಸಕ್ತಿ ಬೆಳೆಯುವದರೊಂದಿಗೆ ಕಲಿಕೆ ಗಟ್ಟೀಕರಣಗೊಳ್ಳುತ್ತದೆ ಎಂದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ