Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಗುಣಮಟ್ಟದ ಕಾಮಗಾರಿ ಟೀಕೆಗಳಿಗೆ ಸೂಕ್ತ ಉತ್ತರ: ಸಚಿವ ಕಾಶಪ್ಪನವರ


ಹುನಗುಂದ: ಅಭಿಯಂತರರು ಮತ್ತು ಗುತ್ತಿಗೆದಾರರು ಸರ್ ಎಂ. ವಿಶ್ವೇಶ್ವರಯ್ಯನವರ ಆದರ್ಶ, ಮಾರ್ಗದರ್ಶನ ಹಾಗೂ ಕಾರ್ಯನಿ?ಯನ್ನು ಮೈಗೂಡಿಸಿಕೊಂಡು ನಿ? ಮತ್ತು ಪ್ರಾಮಾಣಿಕತೆಯಿಂದ ಕಾಮಗಾರಿಗಳನ್ನು ಕೈಗೊಳ್ಳಬೇಕು. ಕಾಮಗಾರಿಗಳ ಗುಣಮಟ್ಟವೆ ಟೀಕೆಗಳಿಗೆ ಸೂಕ್ತ ಉತ್ತರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.
ಪಟ್ಟಣದ ಶ್ರೀ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ್ ಅವಾರ್ಡ ಕಮಿಟಿ ಬೆಂಗಳೂರ ಹಮ್ಮಿಕೊಂಡ ೨೦೨೬ನೇ ಸಾಲಿನ ವಿಶ್ವೇಶ್ವರಯ್ಯ ಸದ್ಭಾವನಾ ಪ್ರಶಸ್ತಿ ಪ್ರಧಾನ ಸಮಾರಂಭಲ್ಲಿ ಸಂಸ್ಥೆ ನೀಡಿದ ಕರ್ನಾಟಕ ಸಮಾಜ ಸೇವಾ ರತ್ನ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡುತ್ತ ದೇಶದ ಅಭಿವೃದ್ಧಿಯಲ್ಲಿ ಅಭಿಯಂತರರು ಮತ್ತು ಗುತ್ತಿಗೆದಾರರ ಪಾತ್ರ ಮಹತ್ವದ್ದಾಗಿದೆ. ಸಾರ್ವಜನಿಕರ ತೆರಿಗೆ ಹಣದಿಂದ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಯೂ ಜನರಿಗೆ ದೀರ್ಘಕಾಲದವರೆಗೆ ಉಪಯೋಗವಾಗುವಂ ತಿರಬೇಕು. ರಸ್ತೆ, ಚರಂಡಿ, ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಭಾರತದ ಶ್ರೇ? ಅಭಿಯಂತರ ಸರ್ ಎಂ. ವಿಶ್ವೇಶ್ವರಯ್ಯನವರು ತಮ್ಮ ಕಾರ್ಯದಕ್ಷತೆ, ಶಿಸ್ತು, ಸಮಯಪ್ರಜ್ಞೆ ಮತ್ತು ಪ್ರಾಮಾಣಿಕತೆಯಿಂದ ದೇಶಕ್ಕೆ ಮಾದರಿಯಾಗಿದ್ದಾರೆ. ಅವರ ಆದರ್ಶಗಳನ್ನು ಇಂದಿನ ಅಭಿಯಂತರರು ಹಾಗೂ ಗುತ್ತಿಗೆದಾರರು ಪಾಲಿಸಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದರ ಜೊತೆಗೆ, ತಾಂತ್ರಿಕ ಮಾನದಂಡಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಕಳಪೆ ಕಾಮಗಾರಿಗಳಿಗೆ ಅವಕಾಶ ನೀಡದೆ, ಸಾರ್ವಜನಿಕರ ವಿಶ್ವಾಸವನ್ನು ಗಳಿಸುವ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು ಎಂದರು.
ಅಭಿವೃದ್ಧಿ ಕಾಮಗಾರಿಗಳಲ್ಲಿ ಲೋಪದೋ?ಗಳು ಕಂಡುಬಂದಲ್ಲಿ ಅವುಗಳನ್ನು ಸರಿಪಡಿಸುವ ಜವಾಬ್ದಾರಿಯನ್ನು ಸಂಬಂಧಪಟ್ಟ ಅಧಿಕಾರಿಗಳು ವಹಿಸಿಕೊಳ್ಳಬೇಕು. ಕಾಮಗಾರಿಗಳ ಅನು?ನದಲ್ಲಿ ಪಾರದರ್ಶಕತೆ ಕಾಪಾಡಿಕೊಂಡು, ಸಾರ್ವಜನಿಕರ ಹಣ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.                                 ಪಿಡಬ್ಲ್ಯುಡಿ ಇಲಾಖೆಯ ಹುನಗುಂದದ ಸಹಾಯಕ ಅಭಿಯಂತರ ಈರಯ್ಯ ಮಾಡಬಾಳಮಠ ಮಾತನಾಡಿ ಪ್ರಶಸ್ತಿ ಪ್ರಧಾನ ಮಾಡಿದರು. ಕಮೀಟಿ ರಾಜ್ಯಾಧ್ಯಕ ಶ್ರೀ ವೆಂಕಟೇಶ ಪ್ರಾಸ್ತಾವಿಕ ಮಾತನಾಡಿದರು. ಪ್ರಥಮ ದರ್ಜೆ ಗುತ್ತಿಗೆದಾರ ಮತ್ತಿ ಅಭಿಯಂತರರಾದ ಕೆ.ಎಸ್. ಪಾಟೀಲ, ರಮೇಶ ಯಾದವಾಡ, ಆನಂದ ನೀರಲಕೇರಿ, ಮಲ್ಲಿಕಾರ್ಜುನ ಲೆಕ್ಕಿಹಾಳ, ಪ್ರಭು ಗೌಂಡಿ, ಮಂಜುನಾಥ ಡೆಂಗಿ, ಶ್ರೀನಾಥ ಚಿಮ್ಮಲಗಿ, ಪ್ರಮೋದ ದ್ವಾರನಹಳ್ಳಿ, ಶಿವರಾಜ ಹಾಲವಾರ,ಮಹಿಬೂಬ ಕೋತವಾಲ ಮತ್ತು ಶ್ರೀನಾಥ ಬಂಧಪಟ್ಟಿ ಸದ್ಭಾವನಾ ಪ್ರಶಸ್ತಿ ಪಡೆದರು. ಈಲ್ಲಾ ಕಾರ್‍ಯನಿರ್ವಾಕ ಅಭಿಯಂತರರು ಪಿಡಬ್ಲುಡಿ ಕೆ, ದುರ್ಗಾದಾಸ, ಶೇಖರಪ್ಪ ಬಾದವಾಡಗಿ, ಮುತ್ತಣ್ಣ ಕಲಗೋಡಿ, ವಿಜಯಮಹಾಂತೇಶ ಗದ್ದನಕೇರಿ, ಮಹಾಂತೇಶ ಅವಾರಿ, ನೌಕರ ಸಂಘದ ಅಧ್ಯಕ್ಷ ಸಂಗಮೇಶ, ಖ್ಯಾತ ವಾಸ್ತುಶಿಲ್ಪಿ ಆದಿತ್ಯ ದೇಸಾಯಿ ಉಪಸ್ಥಿತರಿದ್ದರು. ಪಿಎಂಶ್ರೀ ಶಾಲಾ ಮಕ್ಕಳು ಪ್ರಾರ್ಥಿಸಿದರು. ಆನಂದ ಗದ್ದನಕೇರಿ ನಿರೂಪಿಸಿ ವಂದಿಸಿದರು.                                                                                            ಭಾಕ್ಸ್; ಟೀಕೆಗಳಿಗೆ ಮಾತಿನ ಮೂಲಕ ಪ್ರತಿಕ್ರಿಯಿಸುವ ಬದಲು, ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ನಿರ್ಮಿಸಿ ಅಭಿಯಂತರರು ಮತ್ತು ಗುತ್ತಿಗೆದಾರರು ಜನರ ಮೆಚ್ಚುಗೆ ಗಳಿಸಬೇಕು. ಅಭಿವೃದ್ಧಿ ಕಾರ್ಯಗಳು ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕು. ಸಚಿವ ವಿಜಯಾನಂದ ಕಾಶಪ್ಪನವರ.
೨;ಎಚ್‌ಎನ್‌ಡಿ;೧; ಹುನಗುಂದ ಸಂಗಮೇಶ್ವರ ಕಲ್ಯಾಣ ಮಂಟಪಲ್ಲಿ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜನೀಯರಿಂಗ ಅವಾರ್ಡ ಸಂಸ್ಥೆಯು ಸಚಿವ ವಿಜಯಾನಂದ ಕಾಶಪ್ಪನವರಿಗೆ ಸಮಾಜ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಿತು.   

 

 

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನು ಶಿಕ್ಷಣವು ನ್ಯಾಯಯುತ ಸಮಾಜ ನಿರ್ಮಾಣದ ಪ್ರಮುಖ ಸಾಧನ: ಹಿರಿಯ ನ್ಯಾಯವಾದಿ ಕೆ.ಎಲ್. ಪಾಟೀಲ’ನನ್ನ ದೇಹ, ನನ್ನ ಸುರಕ್ಷತೆ’ ಪರಿಕಲ್ಪನೆಯಡಿ ಮಕ್ಕಳಿಗೆ ಜಾಗೃತಿ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು "ಫಲಾಪೇಕ್ಷೆಯಿಲ್ಲದ ಕಾರ್ಯ ಶ್ಲಾಘನೀಯ" -ಶ್ರೀಗುರುಸಿದ್ದೇಶ್ವರ ಶ್ರೀದೇಶನೂರ ಬಂಗಲೆ ರಸ್ತೆ, ದೇವಸ್ಥಾನದ ಅಭಿವೃದ್ಧಿ ಆದಷ್ಟು ಬೇಗ  ಪ್ರಾರಂಭ : ಬಾಬಾಸಾಹೇಬ ಪಾಟೀಲ ಹತ್ತರಗಿ : ದೀಪ ಸಂಜೀವಿನಿ ಉತ್ಪನ್ನಗಳ ಮಳಿಗೆ ಉದ್ಘಾಟನೆ,"ನಾಡು ನುಡಿ, ಗಡಿ ವಿಚಾರದಲ್ಲಿ ಒಗ್ಗಟ್ಟಿನಿಂದ ಶ್ರಮಿಸಿ  / ನಾಡು ನುಡಿಯ ರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗ ಮುಂದಾಗಬೇಕು"  *ಶಾಲಾ ದಾಖಲಾತಿಯಲ್ಲಿ ಗಣನೀಯ ಏರಿಕೆ: ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು*ವಕೀಲರ ಸಂರಕ್ಷಣೆಯ ಕಾಯ್ದೆ ಪರಿಣಾಮಕಾರಿ ಜಾರಿಗೆ ಸವದತ್ತಿ ವಕೀಲರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಮನವಿ  ಇಂಡಿ: ಸಿದ್ದೇಶ್ವರ ಸ್ವಾಮೀಜಿ ಮಳಿಗೆಗಳ ಬಹಿರಂಗ ಹರಾಜು – ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆವಿದ್ಯುತ್‌ ಸಮಸ್ಯೆಗಳಿಗೆ ಶೀಘ್ರ ಪರಿಹರಿಸಲು ಆಗ್ರಹಿಸಿ ಅನಿರ್ದಿಷ್ಟ ಹೋರಾಟ