ಬಳ್ಳಾರಿ,ನ.03: ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಅರ್ಚನಾ ಎಂ. ಅವರಿಗೆ ಪಿಎಚ್ಡಿ ಪದವಿಯನ್ನು ಪ್ರಕಟಿಸಿದೆ.
ಅರ್ಚನಾ ಎಂ. ಅವರು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಅರ್ಥಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಮೇಧಾವಿನಿ ಎಸ್. ಕಟ್ಟಿ ಅವರ ಮಾರ್ಗದರ್ಶನದಲ್ಲಿ “ಆನ್ಯ್ ಎಕನಾಮಿಕ್ ಅನಾಲಿಸಿಸ್ ಆಫ್ ಎನರ್ಜಿ ಕನ್ಸಂಪ್ಶನ್ ಇನ್ ಕರ್ನಾಟಕ” ಎಂಬ ವಿಷಯದ ಕುರಿತು ಸಂಶೋಧನೆ ನೆಡೆಸಿ ಸಿದ್ಧಪಡಿಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿಯನ್ನು ನೀಡಲಾಗಿದೆ ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.