Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಅರಭಾವಿಯಲ್ಲಿ ಉದ್ಘಾಟನೆಗೊಂಡ ಎಆರ್‌ಟಿಓ ನೂತನ ಕಟ್ಟಡ ಮತ್ತು ಚಾಲನಾ ಪಥ"

ಮೂಡಲಗಿ : ಚಾಲನಾ ಪರವಾನಗಿ ಪಾಸಾಗಲು ಇನ್ನು ಮುಂದೆ ಮ್ಯಾನುವಲ್ ಇರುವುದಿಲ್ಲ. ಬದಲಾಗಿ ಎಲ್ಲ ಚಾಲನಾ ಪಥಗಳಲ್ಲಿ ಸೆನ್ಸಾರ್‌ಗಳನ್ನು ಅಳವಡಿಸಲಾಗುತ್ತಿದ್ದು, ಅದರಲ್ಲಿ ಪಾಸಾದರೆ ಮಾತ್ರ ಚಾಲನಾ ಪರವಾನಗಿ ನೀಡಲಾಗುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಮಂಗಳವಾರದಂದು ತಾಲೂಕಿನ ಅರಭಾವಿಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ನೂತನ ಕಟ್ಟಡ ಮತ್ತು ಚಾಲನಾ ಪಥವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಾಹನ ಸವಾರರ ಬಹು ದಿನಗಳ ಬೇಡಿಕೆಯಾಗಿದ್ದ ಸಹಾಯಕ ಸಾರಿಗೆ ಪ್ರಾದೇಶಿಕ ಕಚೇರಿ ಹಾಗೂ ಚಾಲನಾ ಪಥ ನಿರ್ಮಾಣವಾಗಿದ್ದು, ಇದರ ಹಿಂದಿರುವ ಜಾರಕಿಹೊಳಿ ಸಹೋದರರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಒಟ್ಟು ೪೫ ಆರ್‌ಟಿಓ ಕಚೇರಿ ಹಾಗೂ ಚಾಲನಾ ಪಥಗಳಿದ್ದು, ಇದರಲ್ಲಿ ೧೦ ಪ್ರಾರಂಭವಾಗಿವೆ. ಉಳಿದಿರುವ ೩೫ರ ಕಾಮಗಾರಿ ಸಮೀಪದಲ್ಲೇ ಪೂರ್ಣಗೊಂಡು ಸಿಎಂ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ ಎಂದರು.
ಬೆಮುಲ್ ಅಧ್ಯಕ್ಷ ಹಾಗೂ ಶಾಸಕ ೩೦+೯+-ಬಾಲಚಂದ್ರ ಜಾರಕಿಹೊಳಿ ಮಾತನಾಡಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಚಾಲನಾ ಪಥ ಒಂದೇ ಕಡೆ ಲಭ್ಯವಿರುವಂತೆ ನಿರ್ಮಿಸಲಾಗಿದ್ದು, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಸುಮಾರು ೯ ಎಕರೆ ಜಮೀನಿನಲ್ಲಿ ?೧೦ ಕೋಟಿ ವೆಚ್ಚದಲ್ಲಿ ಇದರ ನಿರ್ಮಾಣವಾಗಿದ್ದು, ಒಂದೇ ಕಡೆ ಚಾಲನಾ ಪಥ ಮತ್ತು ಕಚೇರಿ ಬೆಳಗಾವಿ ಜಿಲ್ಲೆಯಲ್ಲೇ ಎಲ್ಲಿಯೂ ಇಲ್ಲ. ನಮ್ಮ ಕ್ಷೇತ್ರದಲ್ಲಿ ಎರಡೂ ಒಂದೇ ಕಡೆ ನಿರ್ಮಾಣವಾಗಿರುವುದಕ್ಕೆ ಸಂತಸ ತಂದಿದೆ ಎಂದ ಶಾಸಕರು, ಸಹಕಾರ ನೀಡಿದ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಧನ್ಯವಾದಗಳನ್ನು ತಿಳಿಸಿದರು. ಮೊದಲು ಗ್ರಾಮ ಪಂಚಾಯತಿಗೆ ಸೀಮಿತವಾಗಿದ್ದ ಅರಭಾವಿ ಇಂದು ಪಟ್ಟಣ ಪಂಚಾಯತಿ ಆಗಿದೆ. ಕಾಲೇಜು, ಮೊರಾರ್ಜಿ ದೇಸಾಯಿ ಶಾಲೆ, ಎಆರ್‌ಟಿಓ ಕಚೇರಿ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಅರಭಾವಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ರೇಣುಕಾ ಮಾದರ, ಧಾರವಾಡ ಅಪರ್ ಸಾರಿಗೆ ಆಯುಕ್ತ ಕೆ.ಟಿ. ಹಾಲಸ್ವಾಮಿ, ಬೆಳಗಾವಿ ಜಂಟಿ ಸಾರಿಗೆ ಆಯುಕ್ತ ಸಿದ್ದಪ್ಪ ಕಲ್ಲೇರ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಂಕರ್ ಕುಲಕರ್ಣಿ, ಹುಬ್ಬಳ್ಳಿ ಮುಖ್ಯ ಕಾಮಗಾರಿ ಅಭಿಯಂತರ ಸೋಮಣ್ಣ ಅಂಗಡಿ, ಪ್ರಭಾ ಶುಗರ್ಸ ಅಧ್ಯಕ್ಷ ಶಿದ್ಲಿಂಗಪ್ಪ ಕಂಬಳಿ, ಆಂಜನೇಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಂಕರ ಬಿಲಕುಂದಿ, ಗೋಕಾಕ ಟಿಎಪಿಸಿಎಂಎಸ್ ನಿರ್ದೇಶಕ ಮುತ್ತೆಪ್ಪ ಜಲ್ಲಿ, ರೈತ ಮುಖಂಡ ಗಣಪತಿ ಇಳಿಗೇರ, ಬೆಮುಲ್ ನಿರ್ದೇಶಕ ಬಸವರಾಜ ಮಾಳೆದವರ, ರಮೇಶ ಸಂಪಗಾಂವಿ, ರಮೇಶ ಮಾದರ, ಪಟ್ಟಣ ಪಂಚಾಯತಿ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ