LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಭರವಸೆ ನೀಡಿದಂತೆ ಎರಡನೇ ಹಂತದ ಅನುದಾನದ ಚೆಕ್ ಹಸ್ತಾಂತರಿಸಿದ ಲಕ್ಷ್ಮೀ ಹೆಬ್ಬಾಳಕರ್

ವಿಠ್ಠಲ ರುಕ್ಮಾಯಿ ದೇವಸ್ಥಾನ ನಿರ್ಮಾಣಕ್ಕೆ ಮತ್ತೆ ₹10 ಲಕ್ಷ ನೆರವು

ಬೆಳಗಾವಿ: ಕಂಗ್ರಾಳಿ ಬಿಕೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಕಟ್ಟಡ ಕಾಮಗಾರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಆರ್ಥಿಕ ನೆರವಿನ ಭಾಗವಾಗಿ ಎರಡನೇ ಹಂತದ ಸುಮಾರು ₹10 ಲಕ್ಷ ರೂ.ಗಳ ಚೆಕ್‌ ಅನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಗುರುವಾರ ದೇವಸ್ಥಾನ ಸಮಿತಿಯವರಿಗೆ ಹಸ್ತಾಂತರಿಸಿದರು.
ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಒಟ್ಟು ಸುಮಾರು ₹35 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಲಾಗಿತ್ತು. ಅದರಂತೆ ಈಗಾಗಲೇ ಮೊದಲ ಹಂತದ ನೆರವು ನೀಡಲಾಗಿದ್ದು, ಇದೀಗ ಎರಡನೇ ಹಂತದ ಅನುದಾನದ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.
ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯೊಂದಿಗೆ ನಿಕಟವಾಗಿ ಬೆಸೆದುಕೊಂಡಿರುವ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭರವಸೆ ನೀಡಿದರು.
ದೇವಸ್ಥಾನ ನಿರ್ಮಾಣ ಕಾರ್ಯವು ಶೀಘ್ರವಾಗಿ ಪೂರ್ಣಗೊಂಡು ಭಕ್ತರಿಗೆ ಅನುಕೂಲವಾಗಲಿ ಹಾಗೂ ಗ್ರಾಮದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ದೊರೆಯಲಿ ಎಂದು ಅವರು ಆಶಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನ ಸಮಿತಿ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಗರದ 76 ಮನೆಗಳಿಗೆ ಪ್ರಧಾನಿ ನಮೋ ಹುಟ್ಟುಹಬ್ಬದ ಪ್ರಯುಕ್ತ ದೀಪ ವಿತರಣೆಭರವಸೆ ನೀಡಿದಂತೆ ಎರಡನೇ ಹಂತದ ಅನುದಾನದ ಚೆಕ್ ಹಸ್ತಾಂತರಿಸಿದ ಲಕ್ಷ್ಮೀ ಹೆಬ್ಬಾಳಕರ್ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ ಮೂರು ದಿನಗಳ ಕಾಲ ಬಳ್ಳಾರಿ ಧ್ಯಾನ ಮಹಾಯಜ್ಞ 10 : ಕಾರ್ಯಕ್ರಮ ತಂತ್ರಜ್ಞಾನ ಕ್ಷೇತ್ರದಲ್ಲಿ ಸರ್ ಎಂವಿ ಅವರ ಕೊಡುಗೆ ಅಪಾರವಾದದ್ದು :  ಎಚ್ ಮಹಾಬಲೇಶ್ವರ ಕೇಂದ್ರ ಸಾಂಖ್ಯಿಕ ಕಚೇರಿ ಪ್ರಾದೇಶಿಕ ಕ್ರೀಡಾಕೂಟ: ಬಳ್ಳಾರಿಗೆ ಕ್ರಿಕೆಟ್, ಹುಬ್ಬಳ್ಳಿಗೆ ಬ್ಯಾಡ್ಮಿಂಟನ್ ಪ್ರಶಸ್ತಿಬಳ್ಳಾರಿ ಜಿಲ್ಲೆಯಲ್ಲಿ ಗಣೇಶ ಹಬ್ಬಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್: ಡಿಜೆ ಸೌಂಡ್ ಸಿಸ್ಟಮ್ ಹಾಗೂ ಮದ್ಯ ಮಾರಾಟಕ್ಕೆ ನಿಷೇಧಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸರ್ವಜ್ಞ ವಿದ್ಯಾಪೀಠ ವಿದ್ಯಾರ್ಥಿಗಳ ಸಾಧನೆ ಸಕಾಲಕ್ಕೆ ಸಾಲ ಮರುಪಾವತಿಸಿ ಸಂಘದ ಅಭಿವೃದ್ಧಿಗೆ ಸಹಕರಿಸಿ: ಬಸನಗೌಡ