Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಣಯ 


ಬಳ್ಳಾರಿ,ಸೆ17.. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತೆಯರು ಭಾಗವಹಿಸದಿರಲು ನಿರ್ಣಯಿಸಿದ್ದಾರೆ ಎಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘ ಬಳ್ಳಾರಿ ಜಿಲ್ಲಾ ಸಮಿತಿ ತಿಳಿಸಿದೆ.


ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-೨೦೨೫ ರ ಪೂರ್ವಭಾವಿಯಾಗಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸಮೀಕ್ಷೆಯ ನಮೂನೆಯನ್ನು ವಿತರಿಸಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ೆÆÃಷಿಸಿದ್ದಾರೆ. ಆದರೆ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೆ ನಮೂನೆ ನೀಡುವುದರ ಜೊತೆಗೆ, ಸಮೀಕ್ಷೆಯಲ್ಲಿರುವ ೬೦ ಪ್ರಶ್ನೆಗಳಿಗೆ ಮಾಹಿತಿ ನೀಡಲು ಕುಟುಂಬದ ಸದಸ್ಯರು ಮುಂಚಿತವಾಗಿ  ತಯಾರಿರುವಂತೆ ನೋಡಿಕೊಳ್ಳುವುದು, ಅಗತ್ಯ  ದಾಖಲಾತಿಗಳನ್ನು ತೆಗೆದಿಟ್ಟುಕೊಳ್ಳಲು ಹೇಳುವುದು, ಸರಿ ಇಲ್ಲದ ಪಕ್ಷದಲ್ಲಿ ಅವುಗಳನ್ನು ಸರಿಪಡಿಸಿಕೊಳ್ಳುವ ಮಾಹಿತಿಯನ್ನು ನೀಡುವುದು, ನಮೂನೆಗಳನ್ನು ಹಂಚಿರುವ ವಿವರಗಳನ್ನು ಮೊಬೈಲ್ ಅಪ್ಲಿಕೇಶನ್ ನಲ್ಲಿ ಅಪ್ಲೋಡ್ ಮಾಡುವುದು ಇತ್ಯಾದಿ ಕಾರ್ಯಗಳನ್ನು ಮಾಡಬೇಕೆಂದು ತಿಳಿಸಲಾಗಿದೆ. ಈ ಎಲ್ಲಾ ಕೆಲಸಗಳಿಗೆ  ಪತ್ರಿಕೆಯಲ್ಲಿ ವರದಿಯಾಗಿರುವಂತೆ  ೨೦೦೦  ರೂ ನೀಡಲಾಗುವುದು ಎಂಬುದಾಗಿ ಇದೆ. ಆದರೆ ಇಲಾಖೆಯಿಂದ ಇದುವರೆಗೂ ಅಧಿಕೃತವಾಗಿ ಯಾವುದೇ ಆದೇಶ ಬಂದಿಲ್ಲ.


ಈ ಹಿಂದೆಯೂ ಸಹ ಗ್ಯಾರಂಟಿ ಯೋಜನೆಯ ಸಮೀಕ್ಷೆಗೆ ರೂ. ೧೦೦೦ ನೀಡುವುದಾಗಿ ಹೇಳಿ, ಆಶಾ ಕಾರ್ಯಕರ್ತೆಯರು ಸಮೀಕ್ಷೆಯನ್ನು ಮಾಡಿಕೊಟ್ಟ ಮೇಲೆ ಒಂದು ಪೈಸೆಯನ್ನೂ ನೀಡಲಿಲ್ಲ. ಅದೇ ರೀತಿ ಇತರ ಇಲಾಖೆಗಳಿಂದ ಮಾಡಿಸಿಕೊಂಡ ಹಲವಾರು ಸಮೀಕ್ಷೆಗಳಿಗೆ ಇದುವರೆಗೂ ಸೂಕ್ತ ಸಂಭಾವನೆ ದೊರೆತಿಲ್ಲ. ಏಪ್ರಿಲ್ ೧ ರಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.೧೦,೦೦೦  ಗ್ಯಾರಂಟಿ ಗೌರವಧನ ಎಂದು ಭರವಸೆ ನೀಡಿದ ರಾಜ್ಯ ಸರ್ಕಾರ ಇದುವರೆಗೂ ಅದನ್ನೂ ಈಡೇರಿಸಿಲ್ಲ. ಈ ವರ್ಷದ ಬಜೆಟ್ ನಲ್ಲಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.೧೦೦೦ ಹೆಚ್ಚಳ ಮಾಡಿ, ಆಶಾ ಕಾರ್ಯಕರ್ತೆಯರಿಗೆ ಮಾತ್ರ ರೂ.೧೦೦೦ ಹೆಚ್ಚಿಸಲಿಲ್ಲ. ಅದರಂತೆಯೇ  ಈಗ ನಡೆಯಲಿರುವ ಸಮೀಕ್ಷೆ ಕೆಲಸಕ್ಕೆ ಆಶಾ ಕಾರ್ಯಕರ್ತೆಯರಿಗೆ ಎಷ್ಟು ಗೌರವ ಧನ ನೀಡಲಾಗುವುದು ಎಂದು ಸರ್ಕಾರ ಮತ್ತು ಇಲಾಖೆಯ ಅಧಿಕೃತ ಆದೇಶವೇ ಇಲ್ಲ.  ಸರ್ವೆ ಮಾಡುವಷ್ಟು ದಿನಗಳ ಕಾಲ, ಚಟುವಟಿಕೆ ಆಧಾರಿತ ಪ್ರೋತ್ಸಾಹಧನಕ್ಕೂ ಕುತ್ತು ಬರುತ್ತದೆ ಮಾತ್ರವಲ್ಲದೆ, ಈ ಸರ್ವೆಗಾಗಿ ತಮ್ಮ ಸ್ವಂತ ಹಣವನ್ನು ಖರ್ಚು ಮಾಡಿಕೊಂಡು ಬರಿಗೈಯಲ್ಲಿ ಮನೆಗೆ ಹೋಗುವಂತಹ ಪರಿಸ್ಥಿತಿ ಬಂದೊದಗಿದೆ. ಆದ್ದರಿಂದ ಈ ಮೇಲಿನ ಎಲ್ಲಾ ಕಾರಣಗಳಿಂದ ತಮಗೆ ನ್ಯಾಯಯುತವಾಗಿ ಸಿಗಬೇಕಾದ ಗೌರವಧನವೂ ಇಲ್ಲದಿರುವುದರಿಂದ ಸರ್ವೆ ಕೆಲಸದಿಂದಲೇ ಹಿಂದೆ ಸರಿಯಲು ಎಲ್ಲಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ನಿರ್ಣಯ ಮಾಡಿದ್ದಾರೆ.


ಆಶಾ ಕಾರ್ಯಕರ್ತೆಯರು ಪ್ರೋತ್ಸಾಹಧನ ಆಧಾರಿತ ಕೆಲಸ ಮಾಡುವ ಕಾರ್ಯಕರ್ತೆಯರು ಆಗಿರುವುದರಿಂದ, ಈ ಸರ್ವೆ ಮಾಡುವ ದಿನಗಳಲ್ಲಿ ಅವರ ಚಟುವಟಿಕೆಗಳಿಗೆ ಧಕ್ಕೆಯಾಗಿ ಪ್ರೋತ್ಸಾಹ ಧನ ಕಡಿಮೆ ಆಗುವುದರಿಂದಲೂ ಮತ್ತು ಇದು ಹೆಚ್ಚುವರಿ ಕೆಲಸವೂ ಆಗಿರುವುದರಿಂದ ಇವರಿಗೆ ಸಮೀಕ್ಷೆ ಕಾರ್ಯಕ್ಕೆ ರೂ.೫೦೦೦ ಗೌರವಧನ ಕೊಡುವುದು ನ್ಯಾಯೋಚಿತವಾಗಿದೆ. ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ ಆಗಿರುವ ಕಹಿ ಅನುಭವಗಳ ಹಿನ್ನಲೆಯಲ್ಲಿ ಬಾಕಿ ಇರುವ ಅನುದಾನಗಳ ಬಿಡುಗಡೆ ಮಾಡಬೇಕು. ಮತ್ತು ಸರ್ಕಾರ ಈ ಸರ್ವೆ ಕಾರ್ಯಕ್ಕೆ ಗ್ರಾಮೀಣ ಆಶಾಗಳಿಗೆ ರೂ.೫೦೦೦ ರೂ.೧೦,೦೦೦ ಗೂ ಕಡಿಮೆ ಇರದಂತೆ ನಗರ ಆಶಾಗಳಿಗೆ ಗೌರವ ಧನ ನಿಗದಿಪಡಿಸಿ ಆದೇಶವನ್ನು ಕೂಡಲೇ ಹೊರಡಿಸಬೇಕು. ಇದಕ್ಕೆ ಸರ್ಕಾರ ಒಪ್ಪಿದಲ್ಲಿ ಆಶಾ ಕಾರ್ಯಕರ್ತೆಯರು ಸಮೀಕ್ಷೆ ಮಾಡುವುದಾಗಿ ತೀರ್ಮಾನಿಸಿರುವರು.


ಈ ಕೆಳಕಂಡ ಬೇಡಿಕೆಗಳ ಈಡೇರಿಕೆಗೆ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿAದ ಈ ಮೂಲಕ ಸರ್ಕಾರವನ್ನು ಒತ್ತಾಯಿಸುತ್ತೇವೆ.


ಆಶಾ ಯೂನಿಯನ್ ನ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ. ಗೀತಮ್ಮ, ನಗರ ಗೌರವಾಧ್ಯಕ್ಷ ರಾಮಕ್ಕ, ಅಧ್ಯಕ್ಷ ರೇಷ್ಮಾ, ಕಾರ್ಯದರ್ಶಿಗಳಾದ   ಕವಿತಾ, ಸಿರಿಗೇರಿ ಪಿಹೆಚ್ಸೀಯ ಆಶಾಗಳು ಹಾಗೂ ಜಿಲ್ಲಾ ನಾಯಕರುಗಳು ನೇತೃತ್ವವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ