ಹುಬ್ಬಳ್ಳಿ, ಸೆಪ್ಟೆಂಬರ್ 16: ನಗರದ ಹಳೆ ಕೋರ್ಟ್ ಬಳಿ ತೆರಳುತ್ತಿದ್ದಾಗ ಫ್ಲೈಓವರ್ ಕಾಮಗಾರಿಯ ರಾಡ್ ತಲೆ ಮೇಲೆ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸರು, ಇದೀಗ ಮಹಾರಾಷ್ಟ್ರ ಮೂಲದ ಝಂಡು ಕನ್ಸ್ಟ್ರಕ್ಷನ್ ಕಂಪನಿಯ 11 ಜನ ನೌಕರರನ್ನು ಬಂಧಿಸಿದ್ದಾರೆ.
ಝಂಡು ಕನ್ಸ್ಟ್ರಕ್ಷನ್ ಸೂಪರ್ ವೈಸರ್ ಹರ್ಷ ಹೊಸಗಾಣಿಗೇರ, ಲೈಸನಿಂಗ್ ಇಂಜಿನಿಯರ್ ಜಿತೇಂದ್ರ ಪಾಲ್, ಇಂಜನಿಯರ್ ಭೂಪೇಂದರ್, ನೌಕರರಾದ ಮಹಮ್ಮದ್ ಮಿಯಾ, ಅಸ್ಲಂ, ಮೊಹಮ್ಮದ್ ಹಾಜಿ, ಸಬೀಬ್, ರಿಜಾವುಲ್, ಶಮೀಮ್ ಅಲಿಯಾಸ್ ಪಿಂಟು ಶೇಕ್, ಮೊಹಮ್ಮದ್ ಆರೀಫ್ ಹಾಗೂ ಕಾರ್ಮಿಕ ಗುತ್ತಿಗೆದಾರ ಮೊಹಮ್ಮದ್ ರಬಿವುಲ್ ಹಕ್ ಬಂಧಿತರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.