Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಷಿಯನ್ ಡೆವಲಪ್‍ಮೆಂಟ್ ಬ್ಯಾಂಕ್ ತಂಡ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಗೆ ಭೇಟಿ 



ಧಾರವಾಡ: ‘ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ ತರಬೇತಿ ಕೇಂದ್ರ ಸ್ಥಾಪನೆ ಸಹಿತ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲು ಚರ್ಚೆ ನಡೆಸಿದ್ದಾರೆ. ಇದರಿಂದ ಕಾಲೇಜು ಅಭಿವೃದ್ಧಿಗೆ ಸಹಕಾರಿಯಾಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.


ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಕ್ಕೆ ಸೋಮವಾರ ಏಷಿಯನ್ ಡೆವಲಪ್‍ಮೆಂಟ್ ಬ್ಯಾಂಕ್ (ಎಡಿಬಿ) ಸದಸ್ಯರ ಭೇಟಿ– ಚರ್ಚೆ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಮಾತನಾಡಿದರು. ಈ ಕಾಲೇಜಿನಲ್ಲಿ 4500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ. ಎಡಿಬಿ ತಂಡವು ಹಲವು ಸೌಲಭ್ಯಗಳನ್ನು ಒದಗಿಸಿದರೆ ಗುಣಮಟ್ಟದ ಶಿಕ್ಷಣ ನೀಡಲು ಅನುಕೂಲವಾಗಲಿದೆ ಎಂದರು.


ಪ್ರಾಚಾರ್ಯೆ ಪ್ರೊ.ನಳಿನಿ ಬೆಂಗೇರಿ ಮಾತನಾಡಿ, ಎಡಿಬಿ ತಂಡವು ಕಾಲೇಜಿನ ಉನ್ನತೀಕರಣ, ಅವುಗಳಿಗೆ ಮೂಲಸೌಕರ್ಯ ಒದಗಿಸುವುದು, ನಿರ್ವಹಣೆ, ವಿದ್ಯಾರ್ಥಿಗಳಿಗೆ ಕೌಶಲಕ್ಕೆ ಸಂಬಂಧಿಸಿದ ಶಿಕ್ಷಣ ನೀಡುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಕಾಲೇಜಿಗೆ ಅಗತ್ಯವಿರುವ ಮೂಲಸೌಕರ್ಯದ ಬಗ್ಗೆ ತಂಡಕ್ಕೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.


ಎಡಿಬಿ ತಂಡದ ಸದಸ್ಯರು ಕಾಲೇಜಿನ ವಿವಿಧ ಕೊಠಡಿಗಳಿಗೆ ತೆರಳಿ ಮೂಲಸೌಕರ್ಯ ಪರಿಶೀಲಿಸಿದರು. ಹಾಲಿ ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು ಹಾಗೂ ಹುಬ್ಬಳ್ಳಿ-ಧಾರವಾಡ ಉದ್ಯಮಿಗಳೊಂದಿಗೆ ಸಂವಾದ ನಡೆಸಿದರು.


ಎಡಿಬಿ ಸದಸ್ಯರಾದ ನಹ್ಯೂಮ್ ಕಿಮ್, ಯಶಪಾಲ್ ಮಲ್ಲಿಕ್, ಲೇಹ್ ಮ್ಯಾಕ್ ಮ್ಯಾನಸ್, ಸ್ಯಾಮುವೆಲ್ ಕೆ ಅಂಗ್, ಶೌನ್ ಎಂ ವೆಲ್ ಬೌರ್ನ್ ವುಡ್, ಪ್ರೊ. ಶೋಭಾ ಪ್ರೊ.ಗುರುನಾಥ ಬಡಿಗೇರ, ಪ್ರಾಧ್ಯಾಪಕರು, ಉಪನ್ಯಾಸಕರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ