Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎ.ಎಸ್.ಎಂ. ಕಾಲೇಜ್ ನ ಎನ್.ಎಸ್.ಎಸ್ ವಾರ್ಷಿಕ ಶಿಬಿರ ಮುಕ್ತಾಯ ಸಮಾರಂಭ

 

ಬಳ್ಳಾರಿ, ಏ.೨೨:.. ವೀರಶೈವ ವಿದ್ಯಾವರ್ಧಕ ಸಂಘದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಮುಕ್ತಾಯ ಸಮಾರಂಭ ಇಂದು 
  ಕೊರ್ಲಗುಂದಿ ಗ್ರಾಮದ ಶ್ರೀ ಹಾಲುಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಜರುಗಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯಿನಿ ಎಂ ಮರಿದೇವಯ್ಯ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಧೂಪಂ ಸತೀಶ್ ಅವರು ಭಾಗವಹಿಸಿದ್ದರು. ಕೊರ್ಲಗುಂದಿ ಗ್ರಾಮದವರಾದ  ಜಿ ಚಂದ್ರಶೇಖರ್ ರೆಡ್ಡಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ  ಉಪನ್ಯಾಸಕರಾದ  ಡಾ. ಬಸವರಾಜೇಶ್ವರಿ, ರಾಸಾಯನಶಾಸ್ತ್ರ ವಿಭಾಗದ ಉಪನ್ಯಾಸಕರಾದ ಬಸವರಾಜ್ ಹೂಗಾರ್, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಅನುಪಮಾ ಕೆ, ಎಂ.ಕಾಂ ವಿಭಾಗದ ಉಪನ್ಯಾಸಕರಾದ ಶ್ರೀಮತಿ ದಿವ್ಯ ಬೂದೂರು, ಎನ್ ಎಸ್ ಎಸ್ ಅಧಿಕಾರಿಗಳಾದ  ವಿಜಯೇಂದ್ರ ರಂಗ ಪ್ರಸಾದ್ ಹಾಗೂ  ಚೊಳೇಂದ್ರ ಭೂಪಾಲ್, ದೈಹಿಕ ಶಿಕ್ಷಣ ನಿರ್ದೇಶಕರಾದ ಅಶೋಕ್ ಜಿ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎನ್ ಎಸ್ ಎಸ್ ಅಧಿಕಾರಿಗಳಾದ ವಿಜಯೇಂದ್ರ ರಂಗ ಪ್ರಸಾದ್ ಇವರು ಏಳು ದಿನಗಳ ಎನ್ ಎಸ್ ಎಸ್ ವರದಿಯನ್ನು ವಾಚನ ಮಾಡಿದರು. ವಿದ್ಯಾರ್ಥಿನಿಯರಾದ ಕುಮಾರಿ ರಾಜೇಶ್ವರಿ ಎಚ್.ಜಿ ಮತ್ತು ಆರತಿ ಹೆಚ್.ಜಿ ಏಳು ದಿನಗಳ ಎನ್‌ಎಸ್‌ಎಸ್ ಶಿಬಿರದ ಅನುಭವವನ್ನು ಹಂಚಿಕೊಂಡರು, ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಧೂಪಂ ಸತೀಶ್ ಸರ್ ಅವರು ಎನ್ ಎಸ್ ಎಸ್ ಶಿಬಿರ ಕುರಿತು  ವಿದ್ಯಾರ್ಥಿಗಳು ಏಳು ದಿನಗಳ ಕಾಲ ಶ್ರಮಿಸಿದ್ದನ್ನು ಶ್ಲಾಘಿಸಿದರು. ಮುಖ್ಯ ಅಥಿತಿಯಾಗಿ ಆಗಮಿಸಿದ ಡಾ. ಗೋವಿಂದ ರಾಜು ಅವರು ಎನ್ ಎಸ್ ಎಸ್ ಶಿಬಿರಗಳ ಮಹತ್ವ ಕುರಿತು ತಿಳಿಸಿದರು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯಿನಿ ಎಂ ಮರಿದೇವಯ್ಯ ಅವರು  ತಮ್ಮ ಅಧ್ಯಕ್ಷೀಯ ನುಡಿಯಲ್ಲಿ  ಎನ್‌ಎಸ್‌ಎಸ್ ಶಿಬಿರದಲ್ಲಿ ವಿದ್ಯಾರ್ಥಿನಿಯರು ಭಾಗವಹಿಸುವುದರಿಂದ ಅವರ ವ್ಯಕ್ತಿತ್ವ ವಿಕಸನ ಆಗುತ್ತದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ನಿರೂಪಣೆಯನ್ನು ಕೆ ಎಂ ಚೈತನ್ಯವರು ಮಾಡಿದರು ಮತ್ತು ಸ್ವಾಗತ ಭಾಷಣವನ್ನು ಕೆ ಎಂ ಅನುಷಾ ಅವರು ಮಾಡಿದರು ಹಾಗೂ ವಂದನಾರ್ಪಣೆಯನ್ನುಎನ್‌ಎಸ್‌ಎಸ್ ಅಧಿಕಾರಿಗಳಾದ ಚೊಳೇoದ್ರ ಭೂಪಾಲ್ ನೆರವೇರಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ