Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೂತ್ ಮಟ್ಟದ ಅಧಿಕಾರಿಗೆ ಅಗತ್ಯ ಮಾಹಿತಿ ನೀಡಲು ಸಹಕರಿಸಿ: ಮಹೇಶ್ ಎಚ್.

ಇರಕಲ್ಲಗಡಾದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಜಾಗೃತಿ ಜಾಥಾ


ಕೊಪ್ಪಳ ಜುಲೈ 03: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯಕ್ರಮ ಹಮ್ಮಿಕೊಂಡಿದ್ದು ಬೂತ್ ಮಟ್ಟದ ಅಧಿಕಾರಿಗೆ ಅಗತ್ಯ ಮಾಹಿತಿ ನೀಡಲು ಸಹಕರಿಸಬೇಕೆಂದು ಕೊಪ್ಪಳ ತಾಲೂಕ ಪಂಚಾಯತ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಎಚ್. ಅವರು ಕರೆ ನೀಡಿದರು.
 ಕೊಪ್ಪಳ ತಾಲೂಕ ಸ್ವೀಪ್ ಸಮಿತಿ ಕೊಪ್ಪಳ ಹಾಗೂ ಇರಕಲ್ಲಗಡಾ ಗಾಮ ಪಂಚಾಯತಿ ಇವರಗಳ ಸಂಯುಕ್ತಾಶ್ರಯದಲ್ಲಿ ಗುರುವಾರ (ಜು. 02ರಂದು) ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕಾಲೇಜು ವಿದ್ಯಾರ್ಥಿಗಳ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
 ಜಾಗೃತಿ ಜಾಥಾ ಕಾರ್ಯಕ್ರಮದ ಮೂಲಕ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದು ಹಾಗೂ ಮರಣ ಹೊಂದಿರುವವರು, ಸ್ಥಳಾಂತರಗೊಂಡಿರುವವರು, ನಕಲು ಹೆಸರುಗಳು, ಮತ್ತು ಇತರ ಅನರ್ಹ ಮತದಾರರನ್ನು ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವುದು ಇದರ ಉದ್ದೇಶವಾಗಿದೆ. ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಮತದಾರರು ಎಸ್‌ಐಆರ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕೆಂದರು. ಬೂತ್ ಮಟ್ಟದ ಅಧಿಕಾರಿಯು ಪ್ರತಿ ಮನೆಗೆ 03 ಬಾರಿ ಭೇಟಿ ನೀಡಲಿದ್ದಾರೆ. ಅಗತ್ಯ ಮಾಹಿತಿಯನ್ನು ಪ್ರತಿಯೊಬ್ಬರು ಸಲ್ಲಿಸಲು ಇದೊಂದು ಸದಾವಕಾಶ ಹಾಗೂ ಹೊಸದಾಗಿ ಸೇರ್ಪಡೆಗೆ ಅವಕಾಶವಿದೆ ಎಂದರು.
 ವಿದ್ಯಾರ್ಥಿಗಳಿಂದ ಕಾಲ್ನಡಿಗೆ ಮೂಲಕ ಜಾಗೃತಿ ಜಾಥಾವು ಸರ್ಕಾರಿ ಪದವಿಪೂರ್ವ ಕಾಲೇಜಿನಿಂದ ಪ್ರಾರಂಭವಾಗಿ ಗ್ರಾಮದ ಅರಳಿಕಟ್ಟೆ ಮಾರ್ಗವಾಗಿ ಜಾಗೃತಿ ಮೂಡಿಸಿ ಪುನಃ ಕಾಲೇಜಿನ ಆವರಣದಲ್ಲಿ ಮುಕ್ತಾಯಗೊಂಡಿತು. ಬಟಿಂಗ್ಸ್ ಪ್ರದರ್ಶನದಿಂದ ಕಾಲ್ನಡಿಗೆ ಜಾಥಾಕ್ಕೆ ಮೆರಗು ತಂದಿತು. 350 ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
 ಕಾರ್ಯಕ್ರಮದಲ್ಲಿ ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಹನಮಂತಪ್ಪ ಎಚ್, ಪಂಚಾಯತ ಅಭಿವೃದ್ದಿ ಅಧಿಕಾರಿ ಸಿದ್ದಮ್ಮ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಮ ಪಂಚಾಯತ ಕಾರ್ಯದರ್ಶಿ ಪೂರ್ಣೆಂದ್ರಯ್ಯ ಭೂಸನೂರಮಠ, ಸಂಜೀವಿನಿ ಯೋಜನೆಯ ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಸುನೀಲ್, ಉಪನ್ಯಾಸಕ ಶ್ರೀನಿವಾಸಗೌಡ, ವೆಂಕಟರಡ್ಡಿ, ದ್ಯಾಮಣ್ಣ ಸಂಜೀವಿನಿ ಯೋಜನೆಯ ವಿದ್ಯಾಲಕ್ಷ್ಮೀ, ಕರವಸೂಲಿಗಾರ ಕೊಟ್ರೇಶ್, ಗ್ರಾಮ ಪಂಚಾಯತಿ ಡಿಇಒ ಮೌನೇಶ, ಸಿಬ್ಬಂದಿ ರಾಮಣ್ಣ, ಸಂಜೀವಿನಿ ಯೋಜನೆಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
****
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ