Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದುಶ್ಚಟ ತ್ಯಜಿಸಿ ಶಿಸ್ತಿನ ಜೀವನಶೈಲಿ ಅಳವಡಿಸಿಕೊಳ್ಳಿ: ಶಾಂತಲಿಂಗ ಸ್ವಾಮೀಜಿ


ಹರಪನಹಳ್ಳಿ: ದುಶ್ಚಟಗಳಿಂದ ದೂರವಿದ್ದು, ಶಿಸ್ತಿನ ಜೀವನಶೈಲಿ ರೂಢಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಅರಸೀಕೆರೆ ಶ್ರೀ ಕೋಲಶಾಂತೇಶ್ವರ ವಿರಕ್ತಮಠದ ಶ್ರೀ ಶಾಂತಲಿಂಗ ದೇಶಿಕೇಂದ್ರ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.


ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರವು ಶ್ರೀಕೋಲಶಾಂತೇಶ್ವರ ಜನಕಲ್ಯಾಣ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಶ್ರೀಮಠದ ಆವರಣಲ್ಲಿ ಏರ್ಪಡಿಸಿದ್ದ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.


"ಯೋಗದಿಂದ ರೋಗ ದೂರವಾಗುತ್ತದೆ; ಅಂತೆಯೇ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ನಮಗೆ ನೀಡಿದ ಅನೇಕ ಅಂಶಗಳನ್ನು ನಾವಿಂದು ಮರೆತಿದ್ದೇವೆ. ಔಷಧ ರಹಿತವಾಗಿ ನಮ್ಮ ಜೀವನಶೈಲಿ ಮಾರ್ಪಡಿಸಿಕೊಳ್ಳುವ ಮೂಲಕ ಮರೆತ ಅಂಶಗಳನ್ನು ನಮಗೆ ಪ್ರಕೃತಿ ಚಿಕಿತ್ಸಾ ಪದ್ಧತಿ ನೆನಪಿಸುತ್ತಿದೆ. ಈ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ" ಎಂದು ಹೇಳಿದರು.


ಜನನಿ ಆಸ್ಪತ್ರೆ ಕಲ್ಯಾಣ ಕರ್ನಾಟಕಕ್ಕೆ ದೊಡ್ಡ ಕೊಡುಗೆಯಾಗಿದ್ದು, ಮನೆಬಾಗಿಲಲ್ಲೇ ಇಂಥ ಸೌಲಭ್ಯವನ್ನು ಅಭಿವೃದ್ಧಿಪಡಿಸುವುದು ಸಮಾಜಕ್ಕೆ ವರದಾನ. ಜನಸಾಮಾನ್ಯರು ಇದರ ಸೌಲಭ್ಯ ಪಡೆದು ಆರೋಗ್ಯವಂತ ಜೀವನ ಸಾಗಿಸಬೇಕು ಎಂದು ಕರೆ ನೀಡಿದರು.


ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಮಾತನಾಡಿ ‘ಒಮ್ಮೆ ಆರೋಗ್ಯ ಹದಗೆಟ್ಟರೆ ಸರಿಪಡಿಸಿಕೊಳ್ಳುವುದು ಕಷ್ಟಸಾಧ್ಯ. ಆರೋಗ್ಯಸೇವೆ ದುಬಾರಿಯಾಗುತ್ತಿರುವ ಇಂದಿನ ದಿನಗಳಲ್ಲಿ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದೇ ಜಾಣತನ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಪ್ರಯೋಜನ ಪಡೆದುಕೊಳ್ಳುವ ಜತೆಗೆ ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳೋಣ ಎಂದು ಹೇಳಿದರು.


ಪಾಶ್ಚಾತ್ಯರ ಅಂಧಾನುಕರಣೆ ತೊರೆದ ನಮ್ಮ ಆಹಾರಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ರೋಗಗಳಿಂದ ದೂರ ಇರೋಣ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಪ್ರಶಾಂತ್ ಪಾಟೀಲ ಸಲಹೆ ಮಾಡಿದರು.


ತಾಲೂಕಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದರು.


ಈ ಸಂದರ್ಭದಲ್ಲಿ ಡಾ.ಸಹನಾ,ಡಾ.ಯಶಸ್ವಿನಿ,ಡಾ.ನಿಶ್ಚಿತ್,ಆಸ್ಪತ್ರೆಯ ಸಲಹೆಗಾರ ಉದಯ್ ಶಂಕರ್ ಭಟ್,ಪ್ರದೀಪ್,ಕಾಲೇಜು ಪ್ರಚಾರ್ಯ ಸುರೇಶ್,ಬಸವರಾಜ್,ಹಾದಿಮನಿ ರಮೇಶ್,ವಿರೇಶ್ ಇತರರು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ