LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಇಂದು ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಅಂಗವಾಗಿ ಜಾಗೃತಿ ಅಭಿಯಾನ

 

,ಜಮಖಂಡಿ;ರಾಷ್ಟ್ರೀಯ ನೇತ್ರದಾನ ಪಾಕ್ಷಿಕದ ಅಂಗವಾಗಿ ನಗರದಲ್ಲಿ ಸೆ, 8 ರಂದು ಮಂಗಳವಾರ ಬೆಳಿಗ್ಗೆ 8.30ಕ್ಕೆ ಜಾಗೃತಿ ಅಭಿಯಾನ ಆಯೋಜಿಸಲಾಗಿದೆ. ಪ್ರತಿ ವರ್ಷ ಆಗಸ್ಟ್ 25ರಿಂದ ಸೆ. 8 ರವರೆಗೆ ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಆಚರಿಸಲಾಗುತ್ತಿದ್ದು, ಈ ಬಾರಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಸಾರ್ವಜನಿಕರಲ್ಲಿ ನೇತ್ರದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಂದು ಎಂಎಂ ಜೋಷಿ ನೇತ್ರ ವಿಜ್ಞಾನ ಸಂಸ್ಥೆಯ ಆಡಳಿತಾಧಿಕಾರಿ ಧೀರೇಂದ್ರ ಜೋಷಿ ತಿಳಿಸಿದರು, ನಗರದ ಕಾನಿಪ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಸವ ಭವನದಿಂದ ರ್ಯಾಲಿ ಆರಂಭವಾಗಲಿದ್ದು, ಅಶೋಕ ವೃತ್ತ, ಕುಂಚಿನೂರು ರಸ್ತೆ, ಟಿಪ್ಪು ಸುಲ್ತಾನ್ ವೃತ್ತ ಮಾರ್ಗವಾಗಿ ಸಾಗಲಿದೆ. ಬಳಿಕ ದಾನಮ್ಮದೇವಿ ಗುಡಿ ಸಮೀಪದ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಬಳಿ ಮುಕ್ತಾಯಗೊಳ್ಳಲಿದೆ.

ರ್ಯಾಲಿಯಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಬಿಎನ್‌ಐ ನರ್ಸಿಂಗ್ ಕಾಲೇಜು, ಎಸಿಎಂಐ ಮೆಡಿಕಲ್ ಕಾಲೇಜು, ಜೀವನ ಆರೋಗ್ಯ ಪ್ಯಾರಾಮೆಡಿಕಲ್ ಕಾಲೇಜು, ಜೀವನ ಆರೋಗ್ಯ ಬ್ಲಡ್ ಬ್ಯಾಂಕ್, ಸರ್ಕಾರಿ ಪದವಿ ಕಾಲೇಜು, ಸರ್ಕಾರಿ ಪಿಯು ಕಾಲೇಜು, ಹುನ್ನೂರು ಕಾಲೇಜು, ರಾಯಲ್ ಪ್ಯಾಲೆಸ್ ಪದವಿ ಕಾಲೇಜು ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಲಯನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಹ ಕೈಜೋಡಿಸಲಿವೆ. ಉಪವಿಭಾಗಾದಿಕಾರಿ. ಶ್ವೇತಾ ಬೀಡಿಕರ, ಡಿವೈಎಸ್‌ಪಿ ಸೈಯದ್‌ ರೊಷನ್‌ ಜಮೀರ ಪೌರಾಯುಕ್ತ ಜ್ಯೋತಿ ಗಿರೀಶ , ಐಎಂಎ ಅಧ್ಯಕ್ಷ ಡಾ.ದಡ್ಡಿ ಹಾಗೂ ರೋಟರಿ ರಾಮತೀರ್ಥದ ಪದಾಧಿಕಾರಿಗಳು ಮುತ್ತಿನ ಕಂತಿ ಮಠದ ಶಿವಲಿಂಗ ಪಂಡಿತಾರಾಧ್ಯ ಸ್ವಾಮಿಗಳು. ಭಾಗವಹಿಸಲಿದ್ದಾರೆ. ಎಂದು ತಿಳಿಸಿದರು. ಸಾರ್ವಜನಿಕ ಸಂಪರ್ಕ ಅಧಿಕಾರಿ ರವಿ ದಾಸರ ಇದ್ದರು,

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್