ರನ್ನ ಬೆಳಗಲಿ: ನ. ೦೨: ಮಕ್ಕಳಿಗೆ ತಮ್ಮ ಹಕ್ಕುಗಳು ಹಾಗೂ ಕಾನೂನು ರಕ್ಷಣೆಯ ಕುರಿತು ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ. ಶೂನ್ಯ ವಯಸ್ಸಿನಿಂದ ೧೮ ವ?ಗಳವರೆಗೆ ಪ್ರತಿಯೊಬ್ಬರೂ ಮಕ್ಕಳ ವ್ಯಾಪ್ತಿಗೆ ಬರುತ್ತಾರೆ. ಸಂವಿಧಾನ ಹಾಗೂ ಕಾನೂನುಗಳು ಮಕ್ಕಳಿಗೆ ನೀಡಿರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಮುಧೋಳದ ಸಂಪನ್ಮೂಲ ವ್ಯಕ್ತಿ ಕೆ.ಎಸ್. ಅರಿಕೇರಿ ಹೇಳಿದರು.
ಪಟ್ಟಣದ ಶ್ರೀ ಸಿದ್ದಾರೂಢ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ’ಸುರಕ್ಷಿತ ಬಚ್ಪನ್ ಅಭಿಯಾನ’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಮಕ್ಕಳಿಗೆ ಯಾವುದೇ ರೀತಿಯ ಕಿರುಕುಳ ಅಥವಾ ಅನ್ಯಾಯ ಉಂಟಾದರೆ ತಕ್ಷಣವೇ ೧೦೯೮ ಮಕ್ಕಳ ಸಹಾಯವಾಣಿ ಅಥವಾ ೧೧೨ ತುರ್ತು ಸಹಾಯವಾಣಿಯನ್ನು ಸಂಪರ್ಕಿಸಬಹುದು. ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಸಾಗಾಣಿಕೆ ಹಾಗೂ ಅಂಗಾಂಗಗಳ ಅಕ್ರಮ ಮಾರಾಟದಂತಹ ಅಪರಾಧಗಳನ್ನು ತಡೆಗಟ್ಟಲು ಹಲವು ಕಾನೂನುಗಳಿದ್ದು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಮಕ್ಕಳ ಹಕ್ಕುಗಳ ಆಯೋಗ ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಮಕ್ಕಳಿಗೆ ಶಿಕ್ಷಣದ ಹಕ್ಕು, ಆರೋಗ್ಯದ ಹಕ್ಕು, ವಸತಿ, ಆಟ-ಪಾಠ, ಬದುಕುವ ಹಕ್ಕು, ರಕ್ಷಣೆಯ ಹಕ್ಕು, ಅಭಿವೃದ್ಧಿ ಹೊಂದುವ ಹಕ್ಕು ಹಾಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮತ್ತು ಭಾಗವಹಿಸುವ ಹಕ್ಕುಗಳನ್ನು ಕಾನೂನು ಒದಗಿಸಿದೆ. ಬಾಲ್ಯದಲ್ಲಿ ಮಕ್ಕಳು ಈ ಎಲ್ಲ ಹಕ್ಕುಗಳನ್ನು ಸಂತೋ?ದಿಂದ ಅನುಭವಿಸುವಂತಾಗಬೇಕು. ಮಕ್ಕಳಿಗೆ ಸುರಕ್ಷಿತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸುರಕ್ಷಿತ ಮತ್ತು ಅಸುರಕ್ಷಿತ ಪರಿಸರದ ಕುರಿತು ಮಕ್ಕಳು ಜಾಗೃತರಾಗಿರಬೇಕು ಎಂದರು.
ಛತ್ರಪತಿ ಶಿವಾಜಿ ಮಹಾರಾಜರು, ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರಂತಹ ಮಹನೀಯರು ತಮ್ಮ ಜೀವನದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸಲಹೆಗಳಿಗೆ ಮಹತ್ವ ನೀಡಿದ್ದರು. ಅದೇ ರೀತಿ ಇಂದಿನ ಸಮಾಜದಲ್ಲಿ ಮಕ್ಕಳ ಮಾತುಗಳನ್ನು ಆಲಿಸುವ, ಅವರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಹಾಗೂ ಸೂಕ್ತ ಮಾರ್ಗದರ್ಶನ ನೀಡುವ ಪಾಲಕರ ಅವಶ್ಯಕತೆ ಇದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾರ ಮುಖ್ಯ ಶಿಕ್ಷಕಿ ಎಸ್.ಎಸ್. ಉದಪುಡಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಿಆರ್ಪಿ ಬಸವರಾಜ ಬಳ್ಳಾರಿ ಆಗಮಿಸಿದ್ದರು. ಎಂ.ಎ. ಮುಗಳಖೋಡ, ಪಿ.ಕೆ. ಪವಾರ, ಅನಿಲ ನಡುವಿನಮನಿ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿಅವರು ಉಪಸ್ಥಿತರಿದ್ದರು.
ಬಾಲಕೃ? ಚೋಪಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.