Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಘುವಂಶಜನಿಗೆ 'ಸೂರ್ಯ ರಶ್ಮಿಯ ತಿಲಕ'

ಅಯೋಧ್ಯೆ ಏಪ್ರಿಲ್ 17: ರಾಮನವಮಿ ಹಿನ್ನೆಲೆಯಲ್ಲಿ ಭವ್ಯ ರಾಮಮಂದಿರದಲ್ಲಿ ವಿಸ್ಮಯವೊಂದು ಜರುಗಿತು. ಬುಧವಾರ ಮಧ್ಯಾಹ್ನ ಸರಿಯಾಗಿ 12.02 ನಿಮಿಷಕ್ಕೆ ಸರಿಯಾಗಿ ಸೂರ್ಯನ ಕಿರಣಗಳು ರಘುವಂಶಜ ಬಾಲರಾಮನ ಹಣೆಗೆ ಸ್ಪರ್ಶಿಸಿತು. ಇದನ್ನು ಸೂರ್ಯಾಭಿಷೇಕ ಅಥವಾ ಸೂರ್ಯ ತಿಲಕ ಎಂದು ಕರೆಯಲಾಗುತ್ತದೆ. ಪ್ರತಿ ವರ್ಷ ರಾಮನವಮಿಯಂದು ಸೂರ್ಯ ರಶ್ಮಿಯ ವಿಸ್ಮಯ ನೆರವೇರಿತು.

500 ವರ್ಷಗಳ ಕಾಯುವಿಕೆ ಬಳಿಕ ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆಯಾಗಿದೆ. ಮೊದಲ ರಾಮನವಮಿ  ಭವ್ಯ ಮಂದಿರದಲ್ಲಿ ವಿಜೃಂಭಣೆಯಿಂದ ಜರುಗುತ್ತಿದೆ. ಏಪ್ರಿಲ್ 16, 17, 18 ಮೂರು ದಿನ ಸತತ 20 ಗಂಟೆಗಳ ಮಂದಿರವು ಭಕ್ತರಿಗಾಗಿ ತೆರೆದಿರುತ್ತದೆ. ದೇಶ - ವಿದೇಶಗಳಿಂದ ಲಕ್ಷಾಂತರ ಭಕ್ತರು ಬಾಲರಾಮನ ದರ್ಶನಕ್ಕಾಗಿ ಹರಿದುಬರುತ್ತಿದ್ದಾರೆ. ಸುಮಾರು 40 ಲಕ್ಷ ಭಕ್ತರು ಅಯೋಧ್ಯೆಗೆ ಆಗಮಿಸುವ ಅಂದಾಜಿದ್ದು, ಟ್ರಸ್ಟ್ ವತಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ಶಿಲ್ಪಿ ಅರುಣ್ ಯೋಗಿರಾಜ್ ಕೂಡ ರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಆಗಮಿಸಿದ್ದಾರೆ.


ಸರ್ವಾಲಂಕೃತ ಸುಂದರಮೂರ್ತಿ ರಾಮನಿಗೆ ಸೂರ್ಯನು ತನ್ನ ಕಿರಣಗಳಿಂದ ತಿಲಕ ಇಟ್ಟನು. ಮಧ್ಯಾಹ್ನ ಈ ಅಮೋಘ ವಿಸ್ಮಯ ಸಂಭವಿಸಿತು. ಈ ಅದ್ಭುತ ಗಳಿಗೆಯು ಮಾಧ್ಯಮಗಳಲ್ಲಿ ನೇರಪ್ರಸಾರ ಮಾಡಲಾಯಿತು. ಯೂಟ್ಯೂಬ್​​ಗಳಲ್ಲಿ ಇದರ ಪ್ರಸಾರ ಮಾಡಲಾಗುತ್ತಿದೆ.


ಇಂದು ಸಂಭವಿಸಿದ ಸೂರ್ಯ ತಿಲಕ ವಿಸ್ಮಯವನ್ನು ಕಳೆದ ವಾರ ಪ್ರಯೋಗ ಮಾಡಿ ನೋಡಲಾಗಿತ್ತು. ರೂರ್ಕಿಯ CBRI ವಿಜ್ಞಾನಿಗಳು ಈ ಪ್ರಯೋಗ ನಡೆಸಿದ್ದು, ಸೂರ್ಯನ ಕಿರಣಗಳು ರಾಮನ ಹಣೆಯ ಮೇಲೆ ಬಿದ್ದ ತಕ್ಷಣ ರತ್ನದಂತೆ ಹೊಳೆಯಿತು. ಇದರ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.


ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್‌ ಆಸ್ಟ್ರೋಫಿಸಿಕ್ಸ್‌ ಸಹಭಾಗಿತ್ವದಲ್ಲಿ ಒಪ್ಟಿಕಾ ಎಂಬ ಕಂಪನಿ ಈ ಯೋಜನೆಯನ್ನು ರೂಪಿಸಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಮತ್ತು ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸಹಯೋಗದಲ್ಲಿ ಯಂತ್ರವೊಂದನ್ನು ಅಭಿವೃದ್ಧಿಪಡಿಸಲಾಗಿದೆ. ಒಂದಿಷ್ಟು ನಿಮಿಷ ರಾಮನ ಹಣೆಯ ಮೇಲೆ ತಿಲಕದಂತೆ ಸೂರ್ಯನ ಕಿರಣ ಬೀಳಲಿದೆ. ಇಲ್ಲಿ ಅಳವಡಿಸಲಾದ ಆಪ್ಟೋಮೆಕಾನಿಕಲ್ ಸಿಸ್ಟಮ್ ಅತಿಗೆಂಪು ಫಿಲ್ಟರ್‌ನಿಂದ ಮಾಡಲ್ಪಟ್ಟಿದೆ. ಇದಕ್ಕೆ ನಿಖರ ಮಸೂರ ಮತ್ತು ಕನ್ನಡಿಗಳನ್ನು ಬಳಸಿ ವಿಶಿಷ್ಟ ವಿನ್ಯಾಸವನ್ನು ಒದಗಿಸಲಾಗಿದೆ. ಈ ಅಂಶಗಳು ನೈಸರ್ಗಿಕ ಸೂರ್ಯನ ಬೆಳಕನ್ನು ಬಳಸಿಕೊಂಡು ದೈವಿಕ ಸಂಕೇತವಾಗಿ ತಿಲಕವನ್ನು ಉಂಟು ಮಾಡಲಿದೆ.


ರಾಮ ಭಕ್ತರಿಗಾಗಿ ಪ್ರಸಾರ ಭಾರತಿ ಈ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಿದ್ದು, ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಸಂಪೂರ್ಣ ಕಾರ್ಯಕ್ರಮ ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ. ಅಲ್ಲದೆ, ಅಯೋಧ್ಯೆ ಸೇರಿದಂತೆ ಹಲವು ನಗರಗಳಲ್ಲಿ ದೊಡ್ಡ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ. ಡಿಡಿ ನ್ಯೂಸ್ ಮತ್ತು ಡಿಡಿ ನ್ಯಾಷನಲ್ ಯೂಟ್ಯೂಬ್ ಚಾನಲ್‌ನಲ್ಲಿಯೂ ಲೈವ್ ಕವರೇಜ್ ಲಭ್ಯವಿದೆ.


ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಹೇಳುವಂತೆ, ಭಗವಂತ ರಾಮನು ಭೂಮಿಯ ಮೇಲೆ ಅವತರಿಸಿದಾಗ, ಸೂರ್ಯದೇವನು ಅಯೋಧ್ಯೆಯನ್ನು ಒಂದು ತಿಂಗಳು ಬಿಟ್ಟು ಹೋಗಲಿಲ್ಲ ಎಂಬ ಐತಿಹ್ಯವಿದೆ. ರಾಮನವಮಿಯನ್ನು ನಾವು ರಾಮನ ಜನ್ಮದಿನ ಆಚರಿಸುತ್ತೇವೆ. ಇಂದಿನ ಸುದಿನವೇ ಸೂರ್ಯನ ಕಿರಣಗಳು ಭವ್ಯ ಮಂದಿರದಲ್ಲಿ ವಿರಾಜಮಾನವಾಗಿರು ರಾಮನ ಹಣೆಗೆ ತಿಲಕಧಾರಿಯಾಗಲಿದೆ ಎಂದು ತಿಳಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ