LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮೆಜೆಸ್ಟಿಕ್-2ಗೆ ಭರ್ಜರಿ ಐಟಂ ಸಾಂಗ್


    ದರ್ಶನ್ ಗೆ ದೊಡ್ಡ ಹೆಸರು ತಂದುಕೊಟ್ಟ ಚಿತ್ರ ಮೆಜೆಸ್ಟಿಕ್. ದಶಕಗಳ‌ ನಂತರ  ಹೊಸ ಕಾನ್ಸೆಪ್ಟ್ ಇಟ್ಟುಕೊಂಡು  'ಮೆಜೆಸ್ಟಿಕ್-2' ಹೆಸರಿನಡಿ ಚಿತ್ರವೊಂದು ನಿರ್ಮಾಣವಾಗುತ್ತಿದೆ.

     ಆಗಿನ ಮೆಜೆಸ್ಟಿಕ್ ನಲ್ಲಿ ತೊಂಭತ್ತರ ದಶಕದಲ್ಲಿ ರೌಡಿಸಂ ಹೇಗೆ ನಡೆಯುತ್ತಿತ್ತು ಎಂದು ಹೇಳಿದ್ದರೆ, ಈಗಿನ 'ಮೆಜೆಸ್ಟಿಕ್-2' ಮೂಲಕ ಅಲ್ಲಿ ನಡೆಯುವ ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳು, ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ನಿರ್ದೇಶಕ ರಾಮು ಹೇಳ ಹೊರಟಿದ್ದಾರೆ.


     ಈ ಚಿತ್ರದ ಮೂಲಕ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್  ಅವರ ಪುತ್ರ ಭರತ್ ನಾಯಕನಾಗಿ ಪರಿಚಯವಾಗುತ್ತಿದ್ದಾರೆ.  ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ  ಚಿತ್ರದುರ್ಗದ ಹೆಚ್ ಹನುಮಂತಪ್ಪ ಅವರು ನಿರ್ಮಿಸುತ್ತಿದ್ದಾರೆ.


     ಈ ಚಿತ್ರದ ಐಟಂ ಸಾಂಗ್ ವೊಂದರ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಹಾಕಲಾಗಿರುವ ಕಲರ್ಫುಲ್ ಸೆಟ್ ನಲ್ಲಿ ನಡೆದಿದೆ.  ಚಿತ್ರದಲ್ಲಿ ನಾಯಕ ದರ್ಶನ್ ಅವರ ಫ್ಯಾನ್  ಆಗಿ ಕಾಣಿಸಿಕೊಂಡಿದ್ದು, ಅವರ ಮೇಲಿನ ಅಭಿಮಾನದಿಂದ  ಮಾಡುತ್ತಿರುವ, ಈಗಿನ ಟ್ರೆಂಡ್ ಗೆ ತಕ್ಕಂತೆ ಲಿರಿಕ್ ಹೆಣೆದಿರುವ ಹಾಡು ಇದಾಗಿದೆ, 'ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ' ಎಂದು ನಿರ್ದೇಶಕ ರಾಮು ಅವರು  ಬರೆದ ಸಾಹಿತ್ಯಕ್ಕೆ ಗಾಯಕಿ ಮೇಘನಾ ಹಳ್ಳಿಹಾಳ ದನಿಯಾಗಿದ್ದಾರೆ.  ಚಿತ್ರೀಕರಣದಲ್ಲಿ ಐಟಂ ಡಾನ್ಸರ್ ಹಾಗೂ ನಾಯಕನ ಜೊತೆಗೆ ಸಹ ಕಲಾವಿದರುಗಳೂ ಸಹ  ಭಾಗವಹಿಸಿದ್ದರು. ಸಂತೋಷ್ ಈ ಹಾಡಿಗೆ  ಕೊರಿಯಾಗ್ರಾಫ್ ಮಾಡಿದ್ದಾರೆ.


     ಈಗಾಗಲೇ ರಾಮೋಹಳ್ಳಿ, ಹೆಚ್.ಎಂ.ಟಿ., ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ.ನಗರದ ನಿಸರ್ಗ ಹೌಸ್ ಸೇರಿದಂತೆ ಬೆಂಗಳೂರು ಸುತ್ತಮುತ್ತ ಶೇ.50ರಷ್ಟು ಭಾಗದ ಚಿತ್ರೀಕರಣ ಮುಗಿದಿದೆ. ಜೊತೆಗೆ ಚಿತ್ರದುರ್ಗದ ಮುರುಘಾ ಮಠದಲ್ಲಿ ಡ್ಯುಯೆಟ್ ಸಾಂಗ್ ವೊಂದನ್ನು ಸಹ ಶೂಟ್ ಮಾಡಲಾಗಿದೆ.


    ರೌಡಿಸಂ  ಹಾಗೂ ಆಕ್ಷನ್ ಬೇಸ್ ಕಥಾಹಂದರ ಹೊಂದಿರುವ 'ಮೆಜೆಸ್ಟಿಕ್ 2' ಚಿತ್ರದಲ್ಲಿ ನಾಯಕಿಯಾಗಿ ನಟಿ ಸಂಹಿತಾ ವಿನ್ಯಾ ಅವರು ನಟಿಸಿದ್ದಾರೆ. ಹಿರಿಯನಟಿ ಶೃತಿ ಅವರು ತಾಯಿಯ ಪಾತ್ರದಲ್ಲಿ  ಕಾಣಿಸಿಕೊಳ್ಳುತ್ತಿದ್ದಾರೆ.   ಇನ್ನು  ಈ ಚಿತ್ರಕ್ಕೆ  ವಿನು ಮನಸು ಸಂಗೀತ ನಿರ್ದೇಶನವಿದ್ದು,  ವೀನಸ್ ಮೂರ್ತಿ  ಛಾಯಾಗ್ರಹಣವಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್