ಬಳ್ಳಾರಿ (ಕುರುಗೋಡು) ಆ. 21 : ಜಿಲ್ಲೆಯ ಕುರುಗೋಡು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗೌತಮಿ ಬಡಿಗೇರ್ ಬಿ.ಎ. ಪದವಿಯಲ್ಲಿ ಶೇ. 88.11% ಅಂಕ ಗಳಿಸಿ ವಿಶ್ವವಿದ್ಯಾಲಯ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಶಾಂತಲಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಂಲಗ್ನತೆ ಹೊಂದಿರುವ ಕಾಲೇಜಿನಲ್ಲಿ 2022-23 ನೇ ಶೈಕ್ಷಣಿಕ ಸಾಲಿನಿಂದ 2024-25ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಒಟ್ಟು 4600 ಅಂಕಗಳಿಗೆ 4053 ಅಂಕಗಳನ್ನು ಪಡೆಯುವ ಮೂಲಕ (ಶೇ. 88.11%) ಬಿ.ಎ. ವಿಭಾಗದಲ್ಲಿ ವಿಶ್ವವಿದ್ಯಾಲಯಕ್ಕೆ 6ನೇ ರ‍್ಯಾಂಕ್ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿಯ ಸಾಧನೆ ಸಂತಸ ನೀಡಿದ್ದು, ಅವರ ಮುಂದಿನ ಶೈಕ್ಷಣಿಕ ಜೀವನ ಪ್ರಗತಿಪಥದಲ್ಲಿ ಸಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಗೌತಮಿ ಬಡಿಗಾರ್ ಸಾಧನೆಗೆ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಮತ್ತು ಸದಸ್ಯರು, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂಧಿಸಿ ಶುಭ ಹಾರೈಸಿದ್ದಾರೆ.