ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಹೈಕೋರ್ಟ್ ಆಘಾತ ನೀಡಿದೆ. ವಿಚಾರಣಾ ನ್ಯಾಯಾಲಯದ ಅನುಮತಿಯಿಲ್ಲದೆ ರಾಜ್ಯ ಬಿಟ್ಟು ಹೋಗಬಾರದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಿದೆ.
ಸಚಿವರಾಗಿ ಅಧಿಕೃತ ಕರ್ತವ್ಯ ನಿರ್ವಹಣೆ ಹಾಗೂ ಪಕ್ಷದ ಸಭೆಗಳಿಗಾಗಿ ದೆಹಲಿಗೆ ತೆರಳಲು ಜಾಮೀನು ಷರತ್ತು ಸಡಿಲಿಸಬೇಕೆಂದು ನಾಗೇಂದ್ರ ಪರ ವಕೀಲರು ಮನವಿ ಮಾಡಿದ್ದರು. ಆದರೆ ಇಡಿ (ED) ವಕೀಲರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಈ ಹಿಂದೆ ದೇಶಾದ್ಯಂತ ಸಂಚರಿಸಲು ನೀಡಿದ್ದ ಅವಕಾಶವನ್ನು ರದ್ದುಗೊಳಿಸಿ, ರಾಜ್ಯ ತೊರೆಯಲು ನ್ಯಾಯಾಲಯದ ಪೂರ್ವಾನುಮತಿ ಕಡ್ಡಾಯಗೊಳಿಸಿದೆ.