ಕೊಪ್ಪಳ : 18:..ಮುನಿರಾಬಾದ್ ನ ಹುಲಿಗಿ ಜಾತ್ರೆಗೆ ಸಂಡೂರು ಮತ್ತು ಕೂಡ್ಲಿಗಿ ತಾಲೂಕಿನ ಭಕ್ತರು ಜಾತ್ರೆ ಮುಗಿಸಿಕೊಂಡು ವಾಪಸ್ ಬರುವ ಸಮಯದಲ್ಲಿ ಟ್ರಾಕ್ಟರ್ ಮುಗಚಿ ಬಿದ್ದ ಕಾರಣ ಸುಮಾರು ಏಳು ಜನ ಮೃತಪಟ್ಟು 15ಕ್ಕೂ ಹೆಚ್ಚು ಜನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಜಿ ಆರೋಗ್ಯ ಸಚಿವ ಬಿ ಶ್ರೀರಾಮುಲು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಿ ಸಂಬಂಧಿಕರಿಗೆ ಧೈರ್ಯ ತುಂಬಿದರು. ಮತ್ತು ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚಿಸಿದರು
