Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಮಾನಹಾನಿ ಪ್ರಕರಣ: ಸಿಎಂ, ಡಿಸಿಎಂಗೆ​ ಜಾಮೀನು

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇದೇ ವೇಳೆ ಪ್ರಕರಣದಲ್ಲಿ ಸಂಸದ ರಾಹುಲ್ ಗಾಂಧಿ ಖುದ್ದು ಹಾಜರಾತಿಗೆ ವಿನಾಯ್ತಿ ಕೋರಿರುವ ಅರ್ಜಿ ವಿಚಾರಣೆ ನಡೆದು, ಮಧ್ಯಾಹ್ನ ತೀರ್ಪು ಹೊರಬೀಳಲಿದೆ.


ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್​ ಖುದ್ದು ಹಾಜರಾಗಿ, ನ್ಯಾಯಾಧೀಶರಿಗೆ ಕೈ ಮುಗಿದು ನಿಂತರು. ಬಳಿಕ ಅವರ ಪರ ವಕೀಲರು ಅರ್ಜಿ ಸಲ್ಲಿಸಿ, ತಮ್ಮ ಕಕ್ಷಿದಾರರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋಟ್​ರ್ಗೆ ಮನವಿ ಮಾಡಿದರು.


ಈ ಅಂಶ ಪರಿಗಣಿಸಿದ ನ್ಯಾಯಾಲಯ, ಅರ್ಜಿಯ ಸಂಬಂಧ ಮಧ್ಯಾಹ್ನ 3 ಗಂಟೆಗೆ ಆದೇಶ ಪ್ರಕಟಿಸಲಾಗುವುದು ಎಂದು ತಿಳಿಸಿ, ತಾವು ಇನ್ನು ಹೊರಡಬಹುದು ಎಂದು ಸೂಚಿಸಿದರು. ತಕ್ಷಣ ಇಬ್ಬರೂ ನಾಯಕರು ನ್ಯಾಯಾಲಯದಿಂದ ಹೊರನಡೆದರು. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸೂರ್ಯ ಮುಕುಂದರಾಜು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರಿಗೆ ಎಸ್​.ಎ.ಅಹ್ಮದ್​ ಮತ್ತು ಸಿ.ಆರ್​.ದೀಪು ಮತ್ತು ರಾಹುಲ್​ ಗಾಂಧಿ ಅವರಿಗೆ ನಿಶಿತ್​ ಶೆಟ್ಟಿ ಮತ್ತು ಕೆಪಿಸಿಸಿ ಪರವಾಗಿ ಸಂಜಯ್​ ಯಾದವ್​ ಅವರು ವಕಾಲತ್ತು ವಹಿಸಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ