Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಹಿತ್ಯ ಕ್ಷೇತ್ರಕ್ಕೆ ಬೈಲಹೊಂಗಲದ ಕೊಡುಗೆ ಅಪಾರ - ಬಿರಾದಾರ


ನೇಗಿನಹಾಳ: ಅಚ್ಚಗನ್ನಡದ ನಾಡಾಗಿರುವ ಬಯಲು ಹೊಂಗಲವು ಕಲೆ, ಸಾಹಿತ್ಯ, ಸಂಸ್ಕೃತಿ, ಸ್ವಾಭಿಮಾನಗಳ ತವರಾಗಿದ್ದು, ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದೆ ಎಂದು ಯರಗಟ್ಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರಾಜಶೇಖರ ಬಿರಾದಾರ ಹೇಳಿದರು.

 ಬೈಲಹೊಂಗಲ ತಾಲೂಕಿನ ಎಂಟನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿಯಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಬೈಲಹೊಂಗಲ ತಾಲೂಕಿನ ಕೊಡುಗೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿದ ಅವರು ಬೈಲಹೊಂಗಲದ ಕವಿ ಸಾಹಿತಿಗಳು ಆಧುನಿಕ ಸಾಹಿತ್ಯ ಪ್ರಕಾರದ ಎಲ್ಲ ವಿಧಗಳಲ್ಲಿಯೂ ಸಾಹಿತ್ಯ ಕೃಷಿಯನ್ನು ನಡೆಸಿದ್ದು ಕನ್ನಡ ಸಾಹಿತ್ಯ ಪರಿಷತ್ತು, ಮಠಮಾನ್ಯಗಳು ಮತ್ತು ಸಹೃದಯಿ ಓದುಗರು ತಾಲೂಕಿನಲ್ಲಿ ಸಾಹಿತ್ಯಕ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಲು ಶ್ರಮಿಸಿದ್ದಾರೆ ಎಂದು ಪ್ರತಿಪಾದಿಸಿದರು.

 ಮಹಾಂತೇಶ ನಗರ ರಹವಾಸಿಗಳ ಬಿ. ಇ.ಡಿ. ಕಾಲೇಜಿನ ಪ್ರಾಚಾರ್ಯೆ ಡಾ. ನಿರ್ಮಲಾ ಬಟ್ಟಲ್ ಅವರು ಬೈಲಹೊಂಗಲ ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಗಜಾನಂದ ಸೊಗಲನ್ನವರ ಅವರು ಆಶಯ ನುಡಿಗಳನ್ನು ಆಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಪ್ರೊ. ಸಿ. ವಿ. ಜ್ಯೋತಿ ಅವರು ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ತಾಲೂಕು ಘಟಕದ ಅಧ್ಯಕ್ಷರಾದ ಎನ್.ಆರ್. ಠಕ್ಕಾಯಿ, ಗೌರವ ಕಾರ್ಯದರ್ಶಿಗಳಾದ ಡಾ. ಪ್ರಕಾಶ ಮೆಳವಂಕಿ ಉಪಸ್ಥಿತರಿದ್ದರು. ಡಿ.ವೈ. ಗರಗದ ನಿರೂಪಿಸಿದರು, ಸಂತೋಷ ಹಡಪದ ವಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ