LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯಾದ್ಯಂತ ಮುಸ್ಲಿಂ ಬಾಂಧವರ ಬಕ್ರೀದ್‌ ಹಬ್ಬ: ಸಾಮೂಹಿಕ ಪ್ರಾರ್ಥನೆ

ಬಳ್ಳಾರಿ/ಶಿವಮೊಗ್ಗ: ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಮುಸ್ಲಿಂ ಬಾಂಧವರು ರಾಜ್ಯಾದ್ಯಂತ ಶ್ರದ್ಧಾ- ಭಕ್ತಿಯಿಂದ ಆಚರಿಸುತ್ತಿದ್ದಾರೆ.


ಬಕ್ರೀದ್ ವಿಶೇಷ: ಪ್ರವಾದಿ ಇಬ್ರಾಹಿಂ ಅವರು ತಮ್ಮ ಪುತ್ರನನ್ನು ದೇವರಿಗೆ ಅರ್ಪಣೆ ಮಾಡಲು ಮುಂದಾದಾಗ ಮಹಮ್ಮದ್ ಪೈಗಂಬರರು ಇಬ್ರಾಹಿಂ ಪುತ್ರನನ್ನು ಬಲಿ‌ ನೀಡದೇ ಕುರಿಯನ್ನು ಅರ್ಪಣೆ ಮಾಡುವಂತೆ ಹೇಳುತ್ತಾರೆ. ಆಗ ಕುರಿಯನ್ನು ಅರ್ಪಿಸುತ್ತಾರೆ. ಅಂದಿನಿಂದ ಬಕ್ರೀದ್ ಹಬ್ಬವನ್ನು ಆಚರಿಸಿಕೊಂಡು ಬರಲಾಗುತ್ತಿದೆ.


ಬಕ್ರೀದ್​ನಲ್ಲಿ ಮುಖ್ಯವಾಗಿ ಮುಸಲ್ಮಾನರು ದಾನ ಧರ್ಮಗಳನ್ನು ಮಾಡುವವರು. ಇಂದು ಪ್ರತಿಯೊಬ್ಬ ಮುಸಲ್ಮಾನರು ದಾನವನ್ನು ಮಾಡುತ್ತಾರೆ. ಬಕ್ರೀದ್​ನಲ್ಲಿ ನೀಡುವ ಬಲಿಯಲ್ಲಿ ಮೂರು ಭಾಗಗಳನ್ನು ಮಾಡಲಾಗುತ್ತದೆ. ಒಂದು ಭಾಗವನ್ನು ದಾನ ಮಾಡುವವರು ತಾವೇ ಇಟ್ಟುಕೊಂಡು, ಉಳಿದ ಎರಡು ಭಾಗಗಳಲ್ಲಿ ಒಂದು ಭಾಗವನ್ನು ಸಂಬಂಧಿಕರಿಗೆ ಹಾಗೂ ಇನ್ನೊಂದು ಭಾಗವನ್ನು ಅಶಕ್ತರಿಗೆ ನೀಡಲಾಗುತ್ತದೆ. ಇದೇ ಬಕ್ರೀದ್​ನ ವಿಶೇಷ ಎನ್ನಬಹುದು.


ಬಕ್ರೀದ್​ನ ಸಾಮೂಹಿಕ ಪ್ರಾರ್ಥನೆಯ ನಂತರ ಪರಸ್ಪರ ಶುಭಾಶಯ ಕೋರಿಕೊಳ್ಳುತ್ತಾರೆ. ನಂತರ ತಮ್ಮ ತಮ್ಮ ಮನೆಗಳಿಗೆ ತೆರಳಿ ಕುರ್ಬಾನಿಯನ್ನು ನೀಡುತ್ತಾರೆ. ಇಂದು ಎಲ್ಲರೂ ತಮ್ಮ ತಮ್ಮ ಸಂಬಂಧಿಕರ ಮನೆಗೆ ಭೇಟಿ ನೀಡಿ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾರೆ‌.


ಬಕ್ರೀದ್ ಪ್ರಯುಕ್ತ ಶಿವಮೊಗ್ಗದ ಮುಸ್ಲಿಂ ಬಾಂಧವರು ಸರ್.ಎಂ.ವಿಶ್ವೇಶ್ವರಯ್ಯ ರಸ್ತೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿದರು. ಬಕ್ರೀದ್ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್