ಬಳ್ಳಾರಿ (ಪ.ಪಂ) ಲೋಕಸಭಾ ಸಾರ್ವತ್ರಿಕ ಚುನಾವಣೆ: ಒಂದು ನಾಮಪತ್ರ ಸಲ್ಲಿಕೆ
ಬಳ್ಳಾರಿ,ಏ.15:09-ಬಳ್ಳಾರಿ (ಪ.ಪಂ) ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಅಂಗವಾಗಿ ಸೋಮವಾರದಂದು ಕೆ.ಆರ್.ಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಚನ್ನವೀರ ಅವರು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ನಾಮಪತ್ರ ಸಲ್ಲಿಸಿದರು.
ಚುನಾವಣೆಗೆ ಅಧಿಸೂಚನೆ ಪ್ರಕಟವಾದ ಏ. 12 ರಂದು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಏ.15 ಸೋಮವಾರದಂದು ಓರ್ವ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಇದುವರೆಗೆ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆ ದಿನವಾಗಿದ್ದು, ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.