LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸೆ.28ರಂದು ಬಂದ್: ಜ್ಯೋತಿಕುಮಾರ ಪಾಟೀಲ

 

ಕಾಗವಾಡ: ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಾಗವಾಡ ತಾಲೂಕನ್ನು ಕೂಡಲೇ ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಯುವ ಮುಖಂಡ ಜ್ಯೋತಿಕುಮಾರ ಪಾಟೀಲ ಸರ್ಕಾರವನ್ನು ಆಗ್ರಹಿಸಿದರು.
ಶನಿವಾರ ಕಾಗವಾಡ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕಾಗವಾಡ ತಾಲೂಕು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಬಹುತೇಕ ಕುಟುಂಬಗಳ ಬದುಕು ಕೃಷಿ ಹಾಗೂ ಕೃಷಿ ಆಧಾರಿತ ಚಟುವಟಿಕೆಗಳನ್ನೇ ಅವಲಂಬಿಸಿದೆ. ಪ್ರಸಕ್ತ ವರ್ಷ ಸಮರ್ಪಕ ಮಳೆಯಾಗದ ಕಾರಣ ಬಿತ್ತನೆ ಮಾಡಿದ ಬೆಳೆಗಳ ಬೆಳವಣಿಗೆ ಕುಂಠಿತವಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.
ತಾಲೂಕಿನ ಮಳೆಯ ಪ್ರಮಾಣ, ಬೆಳೆನಷ್ಟ, ಮಣ್ಣಿನ ತೇವಾಂಶ, ನೀರಿನ ಲಭ್ಯತೆ ಸೇರಿದಂತೆ ರೈತರ ನೈಜ ಪರಿಸ್ಥಿತಿಯನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ತಕ್ಷಣ ಜಂಟಿ ಸಮೀಕ್ಷೆ ನಡೆಸಿ ಪರಿಶೀಲಿಸಬೇಕು. ಬರ ಘೋಷಣೆಯ ಮಾನದಂಡಗಳನ್ನು ಆಧರಿಸಿ ಕಾಗವಾಡ ತಾಲೂಕನ್ನು ಕೂಡಲೇ ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಸೆ.28ರಂದು ಕಾಗವಾಡ ಪಟ್ಟಣದಲ್ಲಿ ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಉಗ್ರ ಹೋರಾಟ ನಡೆಸಲಾಗುವುದು. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದು ಜ್ಯೋತಿಕುಮಾರ ಪಾಟೀಲ ಎಚ್ಚರಿಕೆ ನೀಡಿದರು.
ಇನ್ನೋರ್ವ ಮುಖಂಡ ಚೇತನ ನಾಂದ್ರೆ ಮಾತನಾಡಿ, ರೈತರ ಸಮಸ್ಯೆಗಳನ್ನು ಸರ್ಕಾರ ನಿರ್ಲಕ್ಷಿಸದೆ ತಕ್ಷಣ ಸ್ಪಂದಿಸಬೇಕು. ಮಳೆಯ ಕೊರತೆಯಿಂದ ಬೆಳೆ ನಷ್ಟ ಅನುಭವಿಸುತ್ತಿರುವ ರೈತರಿಗೆ ಅಗತ್ಯ ಪರಿಹಾರ ಹಾಗೂ ನೆರವು ನೀಡಬೇಕು. ಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸುವವರೆಗೆ ರೈತರು ಹಾಗೂ ವಿವಿಧ ಸಂಘಟನೆಗಳ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಸಭೆಯಲ್ಲಿ ಕಾಕಾ ಪಾಟೀಲ, ಬಾಳು ಕಲ್ಲೋಳೆ, ಅಶೋಕ ಪಾಟೀಲ, ಶಿದ್ರಾಮ ಬಸ್ತವಾಡ, ಶೀತಲ, ಮಲ್ಲಿಕಾರ್ಜುನ ಕಾಂಬಳೆ, ಮಹಾಂತೇಶ ಬಡಿಗೇರ, ಪವನ ಪಾಟೀಲ, ಗಣೇಶ ಕೊಳೆಕರ, ಫಾರೂಕ್ ಅಲಸ್ಕಾರ, ಮುಸ್ತಾಕ ಜಮಾದಾರ, ಮಹಾವೀರ ಧೋಡಾರೆ, ಈಶ್ವರ ಪಾಟೀಲ, ನಿಲೇಶ ಬಾಡಗೆ, ಗೌರೇಶ ಪಾಟೀಲ, ಬಾಲಕೃಷ್ಣ ಬಂಜತ್ರಿ, ಬಾಬಾಸಾಬ ಕೊಟ್ಲಲಗಿ ಸೇರಿದಂತೆ ರೈತರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
22, 23ಕ್ಕೆ ರಾಯಬಾಗ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಇಂಡಿ ತಾಲೂಕಿನ ಹಡಲಸಂಗ ಗ್ರಾಮದಲ್ಲಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಇಂಡಿ ತಾಲುಕಿನ ಭತಗುಣಕಿ ಗ್ರಾಮದ ವಿವಿದ್ದೋದೇಶ ಪ್ರಾಥಮಿಕ ಗ್ರಾಮಿಣ ಕೃಷಿ ಸಹಕಾರಿ ಸಂಘ ಮತ್ತು ಹಾಲು ಉತ್ಪಾದಕರ ಸಂಘದ ಆವರಣದಲ್ಲಿ ನೂತನವಾಗಿ ಸೋಲಾರ ಘಟಕ ವ್ಯವಸ್ಥೆಗೆ ಚಾಲನೆ ನೀಡಿದರು.ಪ್ರಧಾನಿ ನರೇಂದ್ರ ಮೋದಿ, ಈ ದೇಶಕ್ಕೆ ಮತ್ತಷ್ಟು ಭದ್ರ ಬುನಾದಿದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆ, ಸಾಮಾಜಿಕ ಬಹಿಷ್ಕಾರಕ್ಕೆ ಕಡಿವಾಣ ಹಾಕಿ : ಶ್ರೀನಿವಾಸ್ ಕರ್ಚೇಡ್ ನಬಿ ರಸೂಲ್ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆರಿಫಾ ಆಗ್ರಹರಂಜಿಸಿದ ಯಾರಿಗೆ ಬೇಕು ನಿನ್ನ ಕವಿತೆ ನಾಟಕಡಾ.ಬಿ.ಆರ್.ಅಂಬೇಡಕರ್ ಸಂಘಕ್ಕೆ 10 ಲಕ್ಷ ರೂ.ಗಳ ದೇಣಿಗೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿವಿಶೇಷ ನೋಂದಣಿ ಅಭಿಯಾನ ಪರಿಶೀಲಿಸಿದ ವೀಕ್ಷಕ ಕ್ಯಾಪ್ಟನ್ ಕೆ.ರಾಜೇಂದ್ರಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸೆ.28ರಂದು ಬಂದ್: ಜ್ಯೋತಿಕುಮಾರ ಪಾಟೀಲ