LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದು ಬೆಂಗಳೂರು ನಗರದ ಪ್ರಪ್ರಥಮ ಡಬಲ್ ಡೆಕ್ಕರ್ ಫ್ಲೈ ಓವರ್ ಪ್ರಾಯೋಗಿಕ ಚಾಲನೆ




ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಪ್ರಪ್ರಥಮ ಡಬಲ್ ಡೆಕ್ಕರ್ ಫ್ಲೈ ಓವರ್ ಪ್ರಾಯೋಗಿಕ ಚಾಲನೆ ಇಂದು ಬುಧವಾರ ಅಪರಾಹ್ನ ನಡೆಯಲಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಡಬಲ್ ಡೆಕ್ಕರ್ ಅಸ್ತ್ರ ಬಳಸಿದ್ದು ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್ ಪ್ರಾಯೋಗಿಕ ಸಂಚಾರಕ್ಕೆ ಇಂದು ಡಿಸಿಎಂ ಡಿ ಕೆ ಶಿವಕುಮಾರ್ ಹಸಿರು ನಿಶಾನೆ ತೋರಿಸಲಿದ್ದಾರೆ.







ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಡಬಲ್ ಡೆಕ್ಕರ್ ಅಸ್ತ್ರ ಬಳಸಿದ್ದು ದಕ್ಷಿಣ ಭಾರತದ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್ ಪ್ರಾಯೋಗಿಕ ಸಂಚಾರಕ್ಕೆ ಇಂದು ಡಿಸಿಎಂ ಡಿ ಕೆ ಶಿವಕುಮಾರ್ ಹಸಿರು ನಿಶಾನೆ ತೋರಿಸಲಿದ್ದಾರೆ.



ಈ ಹಿಂದೆ ದೇಶದಲ್ಲಿ ಮುಂಬೈ ಜೈಪುರದಲ್ಲಿ ಮಾತ್ರ ಡಬಲ್ ಡೆಕ್ಕರ್ ವ್ಯವಸ್ಥೆ ಇತ್ತು. ಬೆಂಗಳೂರಿನ ಬಹು ನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈ ಓವರ್ 3.36 ಕಿಲೋ ಮೀಟರ್‌ ಉದ್ದವಿದೆ. ಇದು ರಾಗಿಗುಡ್ಡ- ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ನಿರ್ಮಾಣವಾಗಿದೆ. 449 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಡಬಲ್ ಡೆಕ್ಕರ್ ಫ್ಲೈ ಓವರ್, ರಾಗಿಗುಡ್ಡ -ಸಿಲ್ಕ್ ಬೋರ್ಡ್ ಜಂಕ್ಷನ್ ಸಂಚಾರ ದಟ್ಟಣೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ. ಸಿಗ್ನಲ್-ಮುಕ್ತ ಕಾರಿಡಾರ್ ಆಗಿ ಪರಿವರ್ತಿಸುವಲ್ಲಿ ಇದು ಮಹತ್ವದ ಪಾತ್ರವಹಿಸಲಿದೆ. ರಾಗಿಗುಡ್ಡದಿಂದ ಇನ್ಮುಂದೆ ಸಿಗ್ನಲ್‌ ಇಲ್ಲದೆ ಸಿಲ್ಕ್ ಬೋರ್ಡ್ ಜಂಕ್ಷನ್​ಗೆ ಪ್ರಯಾಣಿಸಲು ಅವಕಾಶ ಸಿಗಲಿದೆ.

ಈ ಡಬಲ್​​ ಡೆಕ್ಕರ್​ ಫ್ಲೈಒವರ್​​ನಲ್ಲಿ ಮೆಟ್ರೋ ರೈಲು ಹಾಗೂ ವಾಹನ ಸಂಚರಿಸುತ್ತದೆ. ಕೆಳರಸ್ತೆಯಿಂದ ಡಬ್ಬಲ್‌ ಡೆಕ್ಕರ್‌ನ ಮೊದಲ ಫ್ಲೈಓವರ್‌ 8 ಮೀ. ಎತ್ತರದಲ್ಲಿದ್ದರೆ, ಮೆಟ್ರೋ ವಯಡಕ್ಟ್‌ 16 ಮೀ. ಎತ್ತರದಲ್ಲಿದೆ. ಇದೇ ಮೊದಲ ಬಾರಿಗೆ ನಗರದ ಫ್ಲೈಓವರ್ ಮೇಲೆ ಮೆಟ್ರೋ ಲೇನ್ ಹಾದು ಹೋಗಿದೆ. ಎಚ್‌ಎಸ್‌ಆರ್‌ ಲೇಔಟ್‌ ಹಾಗೂ ಹೊಸುರ್ ಲೇಔಟನ್ನು ಇದರಿಂದ ಅಡ್ಡಿಯಿಲ್ಲದೆ ತಲುಬಹುದು.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ