Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಗ್ರಾಮೀಣ ಕ್ಷೇತ್ರ ಅಭಿವೃದ್ಧಿಗೆ ಬಾರಾಮತಿ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್



ಬೆಳಗಾವಿ :  ರಾಷ್ಟ್ರೀಯ ನಾಯಕ ಶರದ್ ಪವಾರ್ ಅಭಿವೃದ್ಧಿಪಡಿಸಿರುವ ಬಾರಾಮತಿ ಕ್ಷೇತ್ರದ ಮಾದರಿಯಲ್ಲೇ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕೆನ್ನುವ ಸಂಕಲ್ಪದೊಂದಿಗೆ ಕಾರ್ಯೋನ್ಮುಖನಾಗಿದ್ದೇನೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.


ಯಳ್ಳೂರಿನಲ್ಲಿ ಶನಿವಾರ ಸ್ಥಳೀಯ ಮರಾಠಿ ಶಾಲೆಯ ಶತಕೋತ್ತರ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. 2013ರಲ್ಲಿ ಮೊದಲ ಬಾರಿಗೆ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಸಂದರ್ಭದಲ್ಲೇ ಬಾರಾಮತಿ ಮಾದರಿಯಲ್ಲಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕೆನ್ನುವ ಕನಸು ಹೊತ್ತಿದ್ದೆ. ಅದೇ ಮಾದರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜಕೀಯ ಹಿನ್ನೆಲೆ ಇಲ್ಲದ ಕುಟುಂಬದಿಂದ ಬಂದಿರುವ ನನ್ನಂತವರಿಗೆ ಶರದ್ ಪವಾರ ಅವರು ಆದರ್ಶರಾಗಿದ್ದಾರೆ. ಅವರಿಂದ ಬಹಳಷ್ಟು ಕಲಿತಿದ್ದೇನೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಗ್ರಾಮೀಣ ಕ್ಷೇತ್ರದ ರಾಜಹಂಸಗಡದಲ್ಲಿ ಶಿವಾಜಿ ಪುತ್ಥಳಿ ಸ್ಥಾಪಿಸಿ ಅಭಿವೃದ್ಧಿಪಡಿಸಲಾಗಿದೆ. ಅಲ್ಲಿಗೆ ಒಮ್ಮೆ ಭೇಟಿ ನೀಡಬೇಕು ಎಂದು ಶರದ್ ಪವಾರ್ ಅವರಲ್ಲಿ ವಿನಂತಿಸಿದರು.


ಸಂಸ್ಥೆಗಳನ್ನು ಕಟ್ಟಿ ಬೆಳೆಸುವುದು ಸುಲಭವಲ್ಲ. ಆದರೆ ಈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ವಾತಂತ್ರ್ಯ ಪೂರ್ವದಿಂದಲೇ ಶಿಕ್ಷಣ ಸೇವೆ ನೀಡುವ ಮಹತ್ವದ ಕೆಲಸವನ್ನು ಮಾಡುತ್ತ ಬಂದಿದೆ. ಇದು ಕೇವಲ ಶಾಲೆಯಲ್ಲ, ಇದೊಂದು ವಿದ್ಯಾ ಮಂದಿರ. ಇಲ್ಲಿ ಕಲಿತ ಹಲವರು ರಾಜ್ಯ, ರಾಷ್ಟ್ರ, ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಶತಕೋತ್ತರ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸುವರ್ಣ ಅವಕಾಶ ನನಗೆ ಸಿಕ್ಕಿದ್ದು ನನ್ನ ಸುದೈವ ಎಂದು ಹೆಬ್ಬಾಳಕರ್ ಹೇಳಿದರು.


 ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳೂ, ಮಾಜಿ‌ ಕೇಂದ್ರ ಸಚಿವರೂ ಆದ ಶರದ್ ಪವಾರ, ಶಿವಾಜಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ  ಡಾ. ಮಾಣಿಕರಾವ್ ಸಾಳುಂಕೆ, ಮಾಜಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ್ ಕೋರೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ವಿಠ್ಠಲರಾವ್ ಹಲಗೇಕರ್, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಅರವಿಂದ ಪಾಟೀಲ, ರಾವಜಿ ಪಾಟೀಲ, ಎ‌ನ್.ಡಿ.ಗೋರೆ, ಸತೀಶ್ ಪಾಟೀಲ, ಗ್ರಾಮದ ಹಿರಿಯರು, ಮಹಿಳೆಯರು, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ