Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಾದಿ ಶರಣರ ತತ್ವ ಸಿದ್ಧಾಂತಗಳು : ಸಂವಿಧಾನದ ಆಶಯಗಳನ್ನು ಒಳಗೊಂಡಿವೆ







ಬಳ್ಳಾರಿ, ಏ.18.: ವಿಜಯನಗರ ಜಿಲ್ಲಾ  ಶರಣ ಸಾಹಿತ್ಯ ಪರಿಷತ್ ಹಾಗೂ  ಜಾಗತಿಕ ಲಿಂಗಾಯತ ಮಹಾಸಭಾ ವಿಜಯನಗರ ಜಿಲ್ಲಾ ಘಟಕ ಹಾಗೂ ನ್ಯಾಷನಲ್ ಬಿಎಡ್ ಕಾಲೇಜ್ ಹೊಸಪೇಟೆ  ಸಹಯೋಗದೊಂದಿಗೆ ಆಯೋಜಿಸಿದ್ದ  893ನೇ ಬಸವ ಜಯಂತಿ ಪ್ರಯುಕ್ತ ವಿಜಯನಗರ ಜಿಲ್ಲೆಯ ಹೊಸಪೇಟೆಯ ನ್ಯಾಷನಲ್ ಬಿಎಡ್ ಕಾಲೇಜ್  ಕಾಲೇಜು   ವಿದ್ಯಾರ್ಥಿಗಳಿಗೆ   ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣ  ವಿಷಯ  ಕುರಿತು ವಿಶೇಷ ಉಪನ್ಯಾಸ ನೀಡಿದ ಶರಣ ಚಿಂತಕರು ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಕೆ. ರವೀಂದ್ರನಾಥ ಅವರು 12ನೇ ಶತಮಾನದಲ್ಲಿ  ಬಸವಾದಿ ಶರಣರು  ಪ್ರತಿಪಾದಿಸಿದ ತತ್ವ ಸಿದ್ಧಾಂತಗಳು ಸಂವಿಧಾನದ ಆಶಯಗಳಾಗಿವೆ, ಇಂದಿನ ಸಂವಿಧಾನದ ಪೂರ್ವ ಪೀಠಿಕೆಯಲ್ಲಿರುವ ಸ್ವಾತಂತ್ರ, ಸಮಾನತೆ, ಭ್ರಾತೃತ್ವ, ನ್ಯಾಯ, ಈ ಅಂಶಗಳನ್ನು ಬಸವಾದಿ ಶರಣರು 12ನೇ ಶತಮಾನದಲ್ಲಿ ಪ್ರತಿಪಾದಿಸಿ ಸಮ ಸಮಾಜ ನಿರ್ಮಾಣ ಮಾಡಲು ಪ್ರಯತ್ನಿಸಿದ್ದರು, ಆದ್ದರಿಂದ ಅವರುಗಳು ಪ್ರತಿಪಾದಿಸಿದ ತತ್ವ ಸಿದ್ಧಾಂತಗಳು ಕನ್ನಡದ ಅಸ್ಮಿತೆಯಾಗಿದ್ದು ಈ ಸಿದ್ಧಾಂತಗಳು  ಸರ್ವಕಾಲಕ್ಕೂ ಶ್ರೇಷ್ಠವಾಗಿದ್ದು ವಿದ್ಯಾರ್ಥಿಗಳು ಈ ತತ್ವಗಳನ್ನು ಅನುಸರಿಸುವುದರ ಮೂಲಕ ಸಮಾಜವನ್ನು  ಪರಿವರ್ತನೆಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು. ಪ್ರಾಸ್ತಾವಿಕ ನುಡಿಗಳನ್ನು ನುಡಿದ ಜಗತಿಕ ಲಿಂಗಾಯತ ಮಹಾಸಭಾ ವಿಜಯನಗರ ಜಿಲ್ಲಾ ಘಟಕದ ಕಾರ್ಯದರ್ಶಿ ಅಕ್ಕಿ ಮಲ್ಲಿಕಾರ್ಜುನ ಅವರು ಪ್ರಸ್ತುತ  ಕರ್ನಾಟಕದ ಅನೇಕ ಸಾಂಸ್ಕೃತಿಕ ನಾಯಕರ ಜಯಂತಿಗಳು  ಆ ಸಮುದಾಯದ ಜನರಿಗೆ ಮಾತ್ರ ಸೀಮಿತವಾಗಿವೆ, ಆಚರಣೆ ಮಾಡಿಕೊಳ್ಳುತ್ತಿರುವುದು ದುರಂತವಾಗಿದೆ, ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಯಾಕೆ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ, ಆ ಬಸವಾದಿ ಶರಣ ಶರಣೇಯರು ಯಾವ ತತ್ವ ಸಿದ್ಧಾಂತಗಳ ವಿರುದ್ಧ ಹೋರಾಡಿದರೂ, ಯಾರಿಗಾಗಿ ಹೋರಾಡಿದರೂ, ಯಾಕಾಗಿ ಹೋರಾಡಿದರೂ, ಎನ್ನುವ ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಂಡು    ಈ ರಾಷ್ಟ್ರದ ಭವಿಷ್ಯತ್ತಿನ ಪ್ರಜೆಗಳಾದ ವಿದ್ಯಾರ್ಥಿಗಳು ಸಾಂಸ್ಕೃತಿಕ ನಾಯಕರ ವಿಚಾರಧಾರೆಗಳನ್ನು ತಿಳಿದು ಸಮ ಸಮಾಜ ನಿರ್ಮಾಣ ಮಾಡಲು  ಪ್ರಯತ್ನಿಸಬೇಕಾಗಿದೆ,  ಹಾಗಾಗಿ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಅನುಕೂಲಕರವಾಗಲಿ ಎನ್ನುವ ಕಾರಣಕ್ಕಾಗಿ ಈ ಕಾರ್ಯಕ್ರಮವನ್ನು ಪದವಿ ಕಾಲೇಜುಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಜಾಗತಿಕ ಲಿಂಗಾಯತ ಲಿಂಗಾಯತ ಮಹಾಸಭಾ ವಿಜಯನಗರ ಜಿಲ್ಲಾ ಘಟಕ ಅಧ್ಯಕ್ಷರಾದ  ಎಸ್ ಬಸವರಾಜ್ ಮಾವಿನಹಳ್ಳಿ ಅವರು ಕಾರ್ಯಕ್ರಮ ಉದ್ಘಾಟಿಸಿದರು, ಅಧ್ಯಕ್ಷತೆಯನ್ನು ವಿನಾಯಕ ಎಜುಕೇಶನ್ ಸೊಸೈಟಿ. ಅಧ್ಯಕ್ಷರಾದ ಶ್ರೀ ಜಾಲಿ ಬಸವರಾಜ, ವಹಿಸಿಕೊಂಡು ಅಧ್ಯಕ್ಷ ನುಡಿಗಳನ್ನು ನುಡಿದ ಅವರು ಬಸವಣ್ಣ ತತ್ವಗಳು ಕೇವಲ ಯಾವುದೇ ಒಂದು ಜನಾಂಗಕ್ಕೆ, ಯಾವುದೇ ಒಂದು ಸಮುದಾಯಕ್ಕೆ, ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ, ಬಸವಣ್ಣನವರ ತತ್ವಗಳು ಜಾಗತಿಕ ಮನ್ನಣೆಯನ್ನ ಗಳಿಸಿವೆ ಎಂದು ಅಭಿಪ್ರಾಯಪಟ್ಟರು, ಈ ಕಾರ್ಯಕ್ರಮದಲ್ಲಿ ಬಿಎಡ್ ಕಾಲೇಜು ಪ್ರಾಂಶುಪಾಲರಾದ ಡಾ. ಆಯೂಬ್ ಖಾನ್ , ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಡಾ. ಬಿ. ಸತೀಶ್‍ಗೌಡ, ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಸದಸ್ಯರಾದ ಕೆ.ಬಿ. ಪೊಲೀಸ್ ಪಾಟೀಲ್  ಜೆ. ಬಸವನಗೌಡ,  ಶರಣೆ  ಸೌಭಾಗ್ಯಲಕ್ಷ್ಮಿ, ಇತರರು ಉಪಸ್ಥಿತರಿದ್ದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ