Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

*ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

* *ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣ*

* *ಜಿಲ್ಲಾಡಳಿತದ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮ*

ಬೆಳಗಾವಿ: ಜಗತ್ತಿನ ಶ್ರೇಷ್ಠ ದಾರ್ಶನಿಕ ಬಸವಣ್ಣನವರ ತತ್ವ ಆದರ್ಶಗಳು ಕೇವಲ ಆಚರಣೆಗೆ ಮೀಸಲಾಗದೆ, ನಾವೆಲ್ಲರೂ ಅನುಕರಣೆ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಶ್ರೀ ಬಸವೇಶ್ವರ ಉದ್ಯಾನವನದಲ್ಲಿ ಬುಧವಾರ  ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಬಸವಣ್ಣ ಬಗ್ಗೆ ಮಾತನಾಡಲು ಹೋದರೆ ಒಂದು ದಿನ ಸಾಕಾಗುವುದಿಲ್ಲ, ದಿನಗಟ್ಟಲೇ ಮಾತನಾಡಬಹುದು. ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾದರಿ ಎಂದರು.


ಜಾತಿ ರಹಿತ ಸಮಾಜವನ್ನು ಬಯಸಿದ ವ್ಯಕ್ತಿ, ಮೇಲು ಕೀಳು ಎಲ್ಲವನ್ನು ಕಿತ್ತೊಗೆದು, ಸಾಮಾಜಿಕ ಪರಿಕಲ್ಪನೆಯನ್ನು ಇಟ್ಟುಕೊಂಡ ವ್ಯಕ್ತಿ. ಆದರೆ, ನಾವಿಂದು ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ಹೋಗುವ ಬದಲಿಗೆ ಜಾತಿ ಜಾತಿ ಎಂದು ಜಾತಿ ಹಿಂದೆ ಬಿದ್ದಿದ್ದೇವೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.


ನಮ್ಮ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಇಂದು ಧರ್ಮ-ಧರ್ಮ ಹಾಗೂ ಜಾತಿ- ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಸಂದರ್ಭದಲ್ಲಿ ಬಸವಣ್ಣನ ವಿಚಾರಧಾರೆಯಿಂದ ಇಂತವುಗಳನ್ನು ತಡೆಯಲು ಸಾಧ್ಯ. ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು ಎಂದು ಸಚಿವರು ಹೇಳಿದರು.


ಬಸವಾದಿ ಶರಣರು ಸಮಾಜವನ್ನು ಸುಧಾರಣೆ ಮಾಡುವ ಸಲುವಾಗಿ ಜೀವನವನ್ನೇ ಮುಡಿಪಾಗಿಟ್ಟರು. ಆದರೆ, ಇಂದು ಸ್ವಾರ್ಥ, ಸುಳ್ಳು, ಮೋಸ ಮಾಡುವಂತ ಪ್ರತಿವೃತ್ತಿಯೇ ಜಾಸ್ತಿಯಾಗುತ್ತಿದೆ. ಎಂದೆಂದಿಗೂ ಶಾಶ್ವತವಾಗಿ ಉಳಿಯುವಂತಹ  ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳನ್ನು 12ನೇ ಶತಮಾನದಲ್ಲೇ ಸಾರಿದ ಮಹಾನ್ ವ್ಯಕ್ತಿ ಬಸವೇಶ್ವರರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.


ರಾಜಕಾರಣದಲ್ಲಿ ಸೋಲೋದು ಗೆಲ್ಲೋದು ಸಾಮಾನ್ಯ, ಬಸವಣ್ಣನ ತತ್ವ ಆದರ್ಶಗಳನ್ನು ಪಾಲಿಸುವಂತೆಯೇ ನಾನು ನನ್ನ ಮಗ ಮೃಣಾಲ್ ಹೆಬ್ಬಾಳಕರ್‌ಗೆ ಹೇಳಿಕೊಟ್ಟಿದ್ದೇನೆ. ಬಸವಾದಿ ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯೋಣ ಎಂದು ಹೇಳಿದರು.


ಈ ವೇಳೆ ರತ್ನಪ್ರಭಾ ಬೆಲ್ಲದ, ಬಸವರಾಜ ಜಗಜಂಪಿ, ಡಾ.ಎಚ್.ಬಿ.ರಾಜಶೇಖರ, ವಿಜಯಕುಮಾರ ಹೊನಕೇರಿ, ಆರ್.ಪಿ.ಪಾಟೀಲ, ಮುರಘೇಂದ್ರಗೌಡ ಪಾಟೀಲ, ಮೃಣಾಲ್ ಹೆಬ್ಬಾಳಕರ್, ವಿದ್ಯಾವತಿ ಭಜಂತ್ರಿ, ಅನಂತ ಬ್ಯಾಕೊಡ್, ಉದಯಕುಮಾರ್ ತಳವಾರ, ಸೋಮಲಿಂಗ ಮಾವಿನಕಟ್ಟಿ, ಮಲಗೌಡ ಪಾಟೀಲ ಹಾಗೂ ಅನೇಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ