Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಬಸವರಾಜ ಮಾತನವರ ಅವಿರೋಧ ಆಯ್ಕೆ

ಚ,ಕಿತ್ತೂರು: ಸ್ಥಳೀಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಗುರುವಾರ ಯಶಸ್ವಿಯಾಗಿ ಜರುಗಿತು. ಮುಂದಿನ ಐದು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ಬಸವರಾಜ ಎಸ್. ಮಾತನವರ ಹಾಗೂ ಉಪಾಧ್ಯಕ್ಷರಾಗಿ ಸುರೇಶ ಚಂದ್ರಪ್ಪ ಜಾಂಗಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಸಿ. ಆರ್. ಪಾಟೀಲ ಅವರ ಮಾರ್ಗದರ್ಶನದಲ್ಲಿ ಈ ಪ್ರಕ್ರಿಯೆಯು ಶಾಂತಿಯುತವಾಗಿ ನಡೆಯಿತು.
ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರು ಒಮ್ಮತದಿಂದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡುವುದು ಈ ಬಾರಿಯ ಚುನಾವಣೆಯ ವಿಶೇಷವಾಗಿತ್ತು.
ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರಾಗಿ,ಬಸಪ್ಪ, ಎಸ್,ಹುನಶ್ಯಾಳ.ಜೈಯದೇವ, ಮಾರಿಹಾಳ.ಬಸವರಾಜ, ಕ. ಕುಗಟಿ.ಮಂಜುನಾಥ, ಬ, ಭೀಮರಾಣಿ.ಶಂಕರ, ಪರವಣ್ಣವರ.ನಿಜಗುಣಿ, ಬಂಗಿ.ರಮೇಶ, ಸಕ್ರೆನ್ನವರ.ಭೀಮಸಿ, ಮುತ್ತೆನವರ.ರುದ್ರಪ್ಪ, ಎಸ್, ದೇಗಲೋಳ್ಳಿ.ಯಶೋದಾ, ಎನ್, ಜವಳಿ.ವಿಜಯಲಕ್ಷ್ಮಿ, ಎಸ್, ಅಕ್ಕಿ.ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಪ್ರಮುಖರಾದ ಬಸವರಾಜ ಹಡಪದ, ಈರಣ್ಣ ಹೈಬತ್ತಿ ಸೇರಿದಂತೆ ಸಹಕಾರಿ ಕ್ಷೇತ್ರದ ಗಣ್ಯರು ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಆಯ್ಕೆಯಾದ ನೂತನ ಪದಾಧಿಕಾರಿಗಳು ಮಾತನಾಡಿ, "ರೈತರಿಗೆ ಮತ್ತು ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ಬ್ಯಾಂಕಿನ ಸೌಲಭ್ಯಗಳನ್ನು ತಲುಪಿಸಲು ಹಾಗೂ ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ," ಎಂದು ಭರವಸೆ ನೀಡಿದರು. ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಹಾಗೂ ನಿರ್ದೇಶಕರಿಗೆ ಬ್ಯಾಂಕಿನ ಅಭಿಮಾನಿಗಳು ಮತ್ತು ರೈತ ಬಾಂಧವರು ಅಭಿನಂದಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ