ತಾಳಿಕೋಟೆ, ಸಾಮಾಜಿಕ ಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿದ ತಾಳಿಕೋಟೆಯ ಕಾಸಪ್ಪ ಬಸಪ್ಪ ದರಿ ಅವರಿಗೆ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ನವೆಂಬರ್ ೧೫ರಂದು ಧಾರವಾಡದ ಸರ್ಕಾರಿ ನೌಕರರ ಭವನದಲ್ಲಿ ನಾಟ್ಯ ಸ್ಪೂರ್ತಿ ಮತ್ತು ಕಲ್ಚರ್ ಅಕಾಡೆಮಿಯ ೨೬ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡಿರುವ ಕಾಸಪ್ಪ ದರಿ ಅವರ ಕಾರ್ಯವನ್ನು ಪರಿಗಣಿಸಿ ಅಕಾಡೆಮಿಯು ಈ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಕಾರ್ಯಕ್ರಮದಲ್ಲಿ ಮನಸೂರಿನ ರೇವಣಸಿದ್ದೇಶ್ವರ ಮಠದ ಶ್ರೀ ಬಸವರಾಜ ದೇವರು ದಿವ್ಯ ಸಾನಿಧ್ಯ ವಹಿಸಿದ್ದರು. ಜನಪ್ರಿಯ ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಹಾಗೂ ಅಕಾಡೆಮಿಯ ಸಂಸ್ಥಾಪಕ ಸದಾನಂದ ಬಂಗ್ಯಾಣವರ್ ಅವರು ಕಾಸಪ್ಪ ದರಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.