ಹುಬ್ಬಳ್ಳಿ, ಆಗಸ್ಟ್ 23: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ ಪ್ರಾದೇಶಿಕ ಕಚೇರಿ ಆರಂಭವಾಗಿದೆ. ರಾಜ್ಯದ ವಿವಿಧ ವಿಮಾನ ನಿಲ್ದಾಣಗಳ ಭದ್ರತೆ ದೃಷ್ಟಿಯಿಂದ ಈ ಕಚೇರಿ ಆರಂಭಿಸಲಾಗಿದೆ. ಬೆಂಗಳೂರು, ಮಂಗಳೂರು ಹೊರತುಪಡಿಸಿ ಉಳಿದ ಎಲ್ಲ ವಿಮಾನ ನಿಲ್ದಾಣಗಳ ಭದ್ರತಾ ಕ್ರಮಗಳ ತೀರ್ಮಾನ ಹುಬ್ಬಳ್ಳಿ ಕಚೇರಿಯಲ್ಲಿ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಹಾಯಕ ಕಮಿಷನರ್ ಇದರ ಮುಖ್ಯಸ್ಥರಾಗಿರುತ್ತಾರೆ. ಇಂತಹ ಕಚೇರಿ ಹುಬ್ಬಳ್ಳಿಗೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದರು.
ಏನಿದು ಬಿಸಿಎಎಸ್: ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS) ನಾಗರಿಕ ವಿಮಾನಯಾನ ಸಚಿವಾಲಯದ ಅಂಗವಾಗಿದೆ. ಈ ಬಿಸಿಎಸ್ ದೇಶದ ಎಲ್ಲ ವಿಮಾನ ನಿಲ್ದಾಣಗಳ ಭದ್ರತೆಯನ್ನು ನೋಡಿಕೊಳ್ಳುತ್ತದೆ. ಈ ಬಿಸಿಎಎಸ್ದ ಪ್ರಾದೇಶಿಕ ಕಚೇರಿ ಹುಬ್ಬಳ್ಳಿಯಲ್ಲಿ ಆರಂಭವಾಗಿದೆ. ಇದು ಬೆಂಗಳೂರು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನಗಳನ್ನು ಹೊರತುಪಡಿಸಿ ಉಳಿದ ಎಲ್ಲ ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳ ಮೇಲ್ವಿಚಾರಣೆ ನಡೆಸುತ್ತದೆ. ಈ ಬಿಸಿಎಎಸ್ಗೆ ನಿರ್ದೇಶಕರಾಗಿ ಡಿಜಿಪಿ ಶ್ರೇಣಿಯ ಪೊಲೀಸರನ್ನು ನೇಮಕ ಮಾಡಲಾಗುತ್ತದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.